ಜಿಲ್ಲೆ

ಹೋರಾಟದ ಮನೋಭಾವನೆ ಬೆಳೆಸಿಕೊಳ್ಳಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ದಲಿತರ ಪರ ಹೋರಾಡಿ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಮನೋಭಾವನೆ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ಹೇಳಿದರು.

ನಗರದ ಕೆಇಬಿ ಫಂಕ್ಷನ್ ಹಾಲ್‌ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ (ಬಿ. ಕೃಷ್ಣಪ್ಪ ಬಣ ) ವತಿಯಿಂದ ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ರವರ 88ನೇ ಜನ್ಮದಿನಾಚರಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸ್ವಾಭಿಮಾನ ಸಂಘರ್ಷ ಚೈತನ್ಯ ಸಮಾವೇಶದಲ್ಲಿ ಮಾತನಾಡಿದರು. ಪ್ರೊ.ಬಿ.ಕೃಷ್ಣಪ್ಪ ಅವರು ದಲಿತರ ಸಮುದಾಯಗಳ ಮೇಲೆ ನಡೆಯುತ್ತಿರುವ ಶೋಷಣೆ, ಹಿಂಸೆ ಹಾಗೂ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಿದ್ದರು. ತಮ್ಮ ತನು, ಮನ, ಧನ ಧಾರೆ ಎರೆದು ದಲಿತ ಸಮುದಾಯ ಹಾಗೂ ಶೋಷಣೆಗೆ ಒಳಗಾದ ಎಲ್ಲಾ ಸಮುದಾಯವನ್ನು ಒಗ್ಗೂಡಿಸಿ ಅವರ ಏಳಿಗೆಗೆ ದುಡಿದ ಮಹಾನ್ ವ್ಯಕ್ತಿಯಾಗಿದ್ದರು. ರಾಜ್ಯದಲ್ಲಿ ದಲಿತ ಚಳವಳಿಯನ್ನು ಹುಟ್ಟುಹಾಕಿದ ಮಹಾನ್ ನಾಯಕ ಎಂದರೆ ಪ್ರೊ.ಬಿ.ಕೃಷ್ಣಪ್ಪ ಅವರಾಗಿದ್ದರು. ನಾವೆಲ್ಲರೂ ಅವರ ಹೋರಾಟದ ದಾರಿಯಲ್ಲಿ ಸಾಗಬೇಕಾಗಿದೆ ಎಂದು ತಿಳಿಸಿದರು.