ಜಿಲ್ಲೆ

ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಮಕ್ಕಳು ತಮ್ಮ ಕನಸುಗಳನ್ನು ನನಸಾಗಿಸಲು ಶಿಕ್ಷಣವು ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದು ಖ್ಯಾತ ವಿಜ್ಞಾನಿ ಡಾ.ಬಾಲಸುಬ್ರಹ್ಮಣ್ಯಂ ಹೇಳಿದರು.

ಇಲ್ಲಿನ ಎಸ್.ಕೆ. ಮೋದಿ ನ್ಯಾಷನಲ್ ಶಾಲೆಯಲ್ಲಿ ನಡೆದ ಸಮಾಜ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ವೀವಿ ಸಂಘದ ಕಾರ್ಯದರ್ಶಿ ಡಾ.ಅರವಿಂದ್ ಪಾಟೀಲ್ ಮಾತನಾಡಿ, ವೈಜ್ಞಾನಿಕ ಮನೋಭಾವ ಪ್ರತಿಯೊಬ್ಬರಲ್ಲಿ ಬೆಳೆಸಿಕೊಳ್ಳಬೇಕು. ಸಮಾಜಕ್ಕೆ ಯಾವ ಉತ್ತಮ ಅಂಶಗಳು ಅಗತ್ಯಬೇಕು ಎಂಬುವುದು ವಿಜ್ಞಾನದಿಂದಲೇ ತಿಳಿಯಲು ಸಾಧ್ಯ ಎಂದು ತಿಳಿಸಿದರು. ಬಳಿಕ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಶೋಕ, ಲೇಲ್ಯಾಂಡ್ ಕಂಪನಿಯಿಂದ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಪ್ರಮುಖರಾದ ಶಾಲೆಯ ಪ್ರಾಂಶುಪಾಲ ಎಂ.ಸುನಂದ ಪಾಟೀಲ್, ಅಶೋಕ್ ಲೇಲ್ಯಾಂಡ್ ಕಂಪನಿಯ ವ್ಯವಸ್ಥಾಪಕ ಖಾಲೀದ್ ಖಾನ್, ಉಪ ವ್ಯವಸ್ಥಾಪಕ ರಾಮಪ್ರಸಾದ್ ಇದ್ದರು.