ಬಳ್ಳಾರಿ : ಧರ್ಮಸ್ಥಳದ ಪಾವಿತ್ರತ್ಯೆ ಕಾಪಾಡುವ ಉದ್ದೇಶದಿಂದ ಜೆಡಿಎಸ್‌ಯುವ ಘಟಕದ ರಾಜಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಆ.31 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಹೇಳಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹಿಂದುಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪ್ರಚಾರಗಳು ಭಾವನೆಗೆ ಧಕ್ಕೆ ತರುವಂತಿವೆ. ಧರ್ಮಸ್ಥಳದಲ್ಲಿ ನಡೆದ ಘಟನೆಗಳ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿಕೊಂಡು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿರುವುದು ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕಣ್ಣು ಮುಚ್ಚಿಕೊಂಡಿದೆ. ನಗರದಲ್ಲಿ ಜೂಜಾಟ ಅಡ್ಡೆ ಮೇಲೆ ಜಿಲ್ಲಾಧಿಕಾರಿ ದಾಳಿ ಮಾಡುತ್ತೇನೆ ಎಂದರೆ ಹೇಗೆ? ಪೊಲೀಸ್ ಇಲಾಖೆ ಏನೂ ಮಾಡುತ್ತಿದೆ. ಕಳ್ಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟವಾಗುತ್ತಿದೆ. ಹರಿಯಾಣ, ಮುಂಬೈ ಸೇರಿದಂತೆ ನಾನಾ ಹೊರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತಿದೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.