ಬಳ್ಳಾರಿ ಡಿಸಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಡಿಸಿ ಪವನ್‌ಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅದಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ, ಎಡಿಸಿ ಪಿ.ಎಸ್.ಮಂಜುನಾಥ,ಡಿಎಚ್‌ಒ ಡಾ.ಜನಾರ್ದನ್, ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಇದ್ದರು. 
ಜಿಲ್ಲೆ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲೂ ಸೋಂಕಿತರಿಗೆ ಚಿಕಿತ್ಸೆ: ಸಚಿವರಿಗೆ ಡಿಸಿ ಪವನಕುಮಾರ್ ಮಾಲಪಾಟಿ ವಿವರಣೆ

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸದ್ಯ 1360 ಸಕ್ರಿಯ ಪ್ರಕರಣಗಳಿದ್ದು, 274 ಜನರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ತಿಳಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಡಿಸಿ ಮಾಹಿತಿ ನೀಡಿದರು. ಕರೊನಾ ರೋಗಿಗಳಿಗೆ ನೀಡುವ ರೆಮೆಡೆಸಿವಿರ್ ಲಸಿಕೆ ಲಭ್ಯವಿದ್ದು, ಸಮಸ್ಯೆ ಇಲ್ಲ. 1100 ಆಕ್ಸಿಜನ್ ಬೆಡ್‌ಗಳಿ ಇವೆ. ಈಗಾಗಲೇ ಟ್ರಾಮಾಕೇರ್ ಆಸ್ಪತ್ರೆಯಲ್ಲಿನ ಬೆಡ್‌ಗಳಲ್ಲಿ ಸೋಂಕಿತರು ಭರ್ತಿಯಾದ ನಂತರ ವಿಮ್ಸ್‌ನಲ್ಲಿ ವ್ಯವಸ್ಥೆ ಮಾಡಲಾಗುವುದು. ಜಿಲ್ಲಾಸ್ಪತ್ರೆಯಲ್ಲಿಯೂ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 20 ರಿಂದ 40 ಬೆಡ್‌ಗಳು ತಾಲೂಕು ಆಸ್ಪತ್ರೆಗಳಲ್ಲಿ ಲಭ್ಯ ಇವೆ ಎಂದು ಸಚಿವರಿಗೆ ಜಿಲ್ಲಾಧಿಕಾರಿ ಪವನಕುಮಾರ್ ವಿವರಿಸಿದರು. ಕರೊನಾ ಎರಡನೇ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.