ಜಿಲ್ಲೆ

ಅವಧಿ ವಿಸ್ತರಣೆ

ಬಳ್ಳಾರಿ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ ಮತ್ತು ಯುವತಿಯರಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಯನ್ನು ಡಿ.23 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿಗಳ ಕಚೇರಿಯಲ್ಲಿ ಪಡೆಯಬಹುದು. ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.