ಜಿಲ್ಲೆ

ಅಚ್ಚುಕಟ್ಟಾಗಿ ಆಯೋಜಿಸಲು ಸಿದ್ಧತೆಕೈಗೊಳ್ಳಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ಜಿಲ್ಲೆಯಲ್ಲಿ ಮಾ.08 ರಂದು ನಡೆಯುವ ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಎಡಿಸಿ ಮಹಮ್ಮದ್ ಜುಬೇರ್ ಹೇಳಿದರು.

ಇಲ್ಲಿನ ಡಿಸಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬುಡಕಟ್ಟು ಉತ್ಸವ ಕಾರ್ಯಕ್ರಮ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಮಾ.08 ರಂದು ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುವುದು. ಶಿಷ್ಠಾಚಾರದ ನಿಯಮಗಳಂತೆ ಬುಡಕಟ್ಟು ಉತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಆಹ್ವಾನ ಪತ್ರಿಕೆಗಳನ್ನು ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಲು ಕ್ರಮವಹಿಸಬೇಕು ಎಂದರು.

ಬುಡಕಟ್ಟು ಉತ್ಸವ ಕಾರ್ಯಕ್ರಮ ನಡೆಯುವ ಮುನ್ಸಿಪಾಲ್ ಕಾಲೇಜು ಮೈದಾನ ಆವರಣವನ್ನು ಸ್ವಚ್ಛಗೊಳಿಸಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಆಹಾರ ಹಾಗೂ ಗಣ್ಯರು ಕುಳಿತುಕೊಳ್ಳುವುದಕ್ಕೆ ಆಸನ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ನಿರ್ದೇಶಿಸಿದರು. ಬುಡಕಟ್ಟು ಉತ್ಸವವನ್ನು ವ್ಯವಸ್ಥಿತವಾಗಿ ಏರ್ಪಡಿಸಲು ಕ್ರಮ ಕೈಗೊಳ್ಳುವಂತೆ ಇದಕ್ಕೆ ಬೇಕಾದ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಜನಾಕರ್ಷಣಿಯವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ಥಳೀಯ ಹಾಗೂ ಇತರೆ ಜಿಲ್ಲೆಗಳ ಕಲಾವಿದರಿಂದ ವಿವಿಧ ಕಲಾ ಪ್ರಕಾರಗಳು, ಚಿತ್ರಕಲಾ/ಶಿಲ್ಪಾಕಲಾ ಪ್ರದರ್ಶನ, ಕರಕುಶಲ ಪ್ರದರ್ಶನ ಮತ್ತು ಮಾರಾಟ ಹಾಗೂ ಬುಡಕಟ್ಟು ಸಮುದಾಯದ, ವೇಷ ಭೂಷಣ ಆಭರಣಗಳ ಪ್ರದರ್ಶನ ಆಹಾರ ಮೇಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥೆಗೊಳಿಸಬೇಕು ಎಂದು ಹೇಳಿದರು.