ಜಿಲ್ಲೆ

ಗ್ರೂಪ್ ‘ಬಿ’ ವೃಂದದ ನೇಮಕಾತಿ ಪರೀಕ್ಷೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರ ನಡೆಯಿತು.

ಪರೀಕ್ಷೆಗೆ 7,350 ಅಭ್ಯರ್ಥಿಗಳ ಪೈಕಿ 2,642 ಹಾಜರಾಗಿ 4,708 ಅಭ್ಯರ್ಥಿಗಳು ಗೈರಾಗಿದ್ದಾರೆ.

ಇಲ್ಲಿನ 11 ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ 11.30 ವರೆಗೆ ಪರೀಕ್ಷೆಗಳು ಜರುಗಿದವು. ಪರೀಕ್ಷಾ ಕೇಂದ್ರಕ್ಕೆ ಬಂದ ಅಭ್ಯರ್ಥಿಗಳನ್ನು ಕೂಲಂಕಷವಾಗಿ ಪರೀಕ್ಷಿಸಿ ಒಳಗೆ ಬಿಡುತ್ತಿದ್ದ ದೃಶ್ಯಗಳು ಎಲ್ಲ ಕೇಂದ್ರಗಳಲ್ಲಿ ಸಾಮಾನ್ಯವಾಗಿ ಕಂಡವು.

ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿತ್ತು. ಸುತ್ತಲ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿತ್ತು. 200 ಮೀಟರ್ ವ್ಯಾಪ್ತಿಯ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳನ್ನು ಮುಚ್ಚಿಸಲಾಗಿತ್ತು.