ಜಿಲ್ಲೆ

ರಾಜ್ಯದಲ್ಲಿ ಸಿಎಂ ಬದಲಾವಣೆ ಸನಿಹ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಸಿಎಂ ಆಗ್ರಿಮೆಂಟ್ ಅವಧಿ ಪೂರ್ಣಗೊಂಡಿದ್ದು, ಸಿಎಂ ಬದಲಾವಣೆ ಚರ್ಚೆ ಅರಂಭವಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ್ ರಾಜ್ಯಕ್ಕೆ ಭೇಟಿ ನೀಡಿ ಶಾಸಕರ ವೈಯಕ್ತಿಕ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ಸಿಎಂ ಹುದ್ದೆ ತ್ಯಜಿಸುವುದು ಬಹಳ ಕಠಿಣ. ಆದ್ದರಿಂದ, ದಲಿತರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪಿ.ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ, ಲಿಂಗಾಯತರಲ್ಲಿ ಸಚಿವ ಎಂ.ಬಿ.ಪಾಟೀಲ್, ಒಕ್ಕಲಿಗರಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸಿಎಂ ಸ್ಥಾನ ನೀಡಲಿ ಎಂಬ ಬೇಡಿಕೆಯನ್ನು ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿ, ಡಿಸಿಎಂ ಡಿಕೆ ಶಿವಕುಮಾರ ಅವರನ್ನು ಸಿಎಂ ಸ್ಥಾನದಿಂದ ತಪ್ಪಿಸಲು ಚೆಸ್ ಗೇಮ್ ಆಡಲಿದ್ದಾರೆ. ಇದರಿಂದ ಡಿಕೆ ಶಿವಕುಮಾರ ಸಿಎಂ ಆಗುವುದು ಸಾಧ್ಯವಿಲ್ಲ , ಡಿಸಿಎಂಯಾಗಿಯೇ ಮುಂದುವರಿಯಲಿದ್ದಾರೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬುದಾಗಿ ಘೋಷಿಸಿ ಸ್ಪಷನೆ ನೀಡಲಿ ಎಂದರು.

ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನಿಸಿದೆ. ಇದೇ ಜೂ 15 ರಂದು ಕಾಂಗ್ರೆಸ್‌ನ ಹಾಲಿ ಸಿಎಂ ಹಾಗೂ ಮಾಜಿ ಸಿಎಂ ಗಳ ಸಭೆಯನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ ಎಂದರು.

ಜಿಲ್ಲೆಯ ಶಾಸಕರು ಹಾಗೂ ಸಚಿವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳಸಿಕೊಂಡು ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದ್ದಾರೆ. ಈಗಾಗಲೇ ಇಡಿಗೆ ಡಿಜಿಟಿಲ್ ಸಾಕ್ಷೃ ಆಧಾರಗಳು ದೊರೆತಿವೆ. ಮತ್ತೋಮ್ಮೆ ಶಾಸಕ ಬಿ.ನಾಗೇಂದ್ರ ಜೈಲಿಗೆ ಸೇರಲಿದ್ದಾರೆ ಎಂದು ಭವಿಷ್ಯ ನುಡಿದರು.

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಕುರ್ಚಿ ಖಾಲಿಯಿಲ್ಲ. ಇನ್ನೂ ಒಂದೂವರೆ ವರ್ಷದ ಅಧಿಕಾರ ಅವಧಿಯಿದೆ. ಯಾರು ಬದಲಾಯಿಸುವಂತೆ ಕೇಂದ್ರ ನಾಯಕರ ಜತೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.

=====