ಜಿಲ್ಲೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ

ಬಳ್ಳಾರಿ ; ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆ ಯುವಕನೊಬ್ಬನ ವಿರುದ್ಧ ಪೊಕ್ಸೋ ಅಡಿ ತಾಲೂಕಿನ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಮ್ಮಲಾಪುರದ ಕೊರಚರಹಟ್ಟಿಯ ಮನೋಜ್(22)ಆರೋಪಿ. ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ನೀಡಿದ ದೂರು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.