ಜಿಲ್ಲೆ

ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಬಳ್ಳಾರಿ : ಇಲ್ಲಿನ ಸರ್ಕಾರಿ ಪದವಿ ಪೂರ್ವ(ಮಾ.ಪು) ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಸೆ.17 ರಂದು ಬೆಳಗ್ಗೆ 9 ಗಂಟೆಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪೌರಾಡಳಿತ ಸಚಿವ ರಹೀಂ ಖಾನ್ ಧ್ವಜಾರೋಹಣ ನೆರವೇರಿಸುವರು. ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಜಿಲ್ಲಾಡಳಿತದಿಂದ ಪ್ರಕಟಣೆಯಲ್ಲಿ ತಿಳಿಸಿದೆ.

ಡಿಐಜಿ ವರ್ತಿಕ ಕಟಿಯಾರ್, ಡಿಸಿ ನಾಗೇಂದ್ರ ಪ್ರಸಾದ್, ಎಸ್ಪಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಎಡಿಸಿ ಮಹಮ್ಮದ್ ಎನ್. ಜುಬೇರ್ ಉಪಸ್ಥಿತರಲಿದ್ದಾರೆ.

----------