ಜಿಲ್ಲೆ

ನೀರಿನ ಮೂಲಗಳು ಸ್ವಚ್ಛವಾಗಿಡಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ನಗರ ಪ್ರದೇಶಗಳಲ್ಲಿ ನೀರಿನ ಮೂಲಗಳನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬ ಪಾಲಿಕೆಯ ಸಿಬ್ಬಂದಿ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಮರಿಯಂಬಿ ಹೇಳಿದರು.

ನಗರದ ಪಾಲಿಕೆ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಾಲಿಕೆ ಸಹಯೋಗದೊಂದಿಗೆ ನೀರು ಸರಬರಾಜು ಮಾಡುವ ಸಿಬ್ಬಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಕುಡಿವ ನೀರಿನ ಪೈಪ್‌ಲೈನ್ ಚರಂಡಿ ಬಳಿ ಹಾದು-ಹೋದಲ್ಲಿ ಸಿಬ್ಬಂದಿ ನಿರಂತರ ನಿಗಾ ವಹಿಸಬೇಕು. ಪೈಪ್ ಲೈನ್ ದುರಸ್ತಿ ಕಂಡು ಬಂದಲ್ಲಿ ಸಾರ್ವಜನಿಕರಿಗೆ ಜಾಗೃತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ಕುಡಿವ ನೀರಿನ ಪೈಪ್ ಸೋರಿಕೆ ಕಂಡುಬಂದಲ್ಲಿ ಪಾಲಿಕೆಯ ಮೇಲ ಅಧಿಕಾರಿಗಳ ಗಮನಕ್ಕೆ ತರಬೇಕು. ದುರಸ್ತಿ ಜತೆ ನಗರದಲ್ಲಿ ಕಂಡುಬರುವ ಸಂಭವನೀಯ ವಾಂತಿ ಭೇದಿ ಪ್ರಕರಣಗಳ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.

ಆರೋಗ್ಯ ಇಲಾಖೆಯಿಂದ ನೀಡುವಂತಹ ತಾಂತ್ರಿಕ ಸಲಹೆ ಪಾಲಿಸುವುದರ ಜತೆಗೆ ಮುಖ್ಯವಾಗಿ ನೀರು ಶುದ್ಧೀಕರಣ ಸಂದರ್ಭದಲ್ಲಿ ತಾಂತ್ರಿಕ ಕ್ರಮ ಅನುಸರಿಸಬೇಕು ಎಂದು ಹೇಳಿದರು.