ಜಿಲ್ಲೆ

ಜೈವಿಕ ಯೋಜನೆ ರೈತರಿಗೆ ತಲುಪಲಿ

ಬಳ್ಳಾರಿ: ಜಿಲ್ಲೆಯ ರೈತರಿಗೆ ಜೈವಿಕ ಇಂಧನ ಯೋಜನೆ ಕಾರ್ಯ ತಲುಪುವಲ್ಲಿ ಯಶ್ವಸಿಯಾಗಬೇಕು ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್. ಸುಧೀಂದ್ರ ಅಧಿಕಾರಿಗಳಿಗೆ ಹೇಳಿದರು.

ತಾಲೂಕಿನ ಹಗರಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಭಾನುವಾರ ಭೇಟಿ ಮಾತನಾಡಿದರು. ರಾಜ್ಯದಲ್ಲಿ ಮಂಡಳಿಯು ಜೈವಿಕ ಇಂಧನ ಕ್ಷೇತ್ರದ ಉನ್ನತೀಕರಣ ಹಾಗೂ ವಾಣಿಜ್ಯೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಕಾರ್ಯಯೋಜನೆಗಳ ಕುರಿತು ವಿವರಿಸಿದರು. ಮುಂದಿನ ದಿನಗಳಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಬಯೋಡಿಸಲ್, 2ಜಿ ಎಥನಾಲ್ ಜತೆಗೆ ಬಯೋ ಗ್ಯಾಸ್ ಸಿಬಿಜಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯಪಟ್ಟರು. ಹಾಗೆಯೇ ಬಯೋ ಗ್ಯಾಸ್ ಉತ್ಪಾದನಾ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಮಂಡಳಿಯು ಪೂರಕ ನಿರ್ಮಾಣ ಮಾಡಲು ಯೋಜನೆಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.

ಬಳಿಕ ಯುವ ವಿದ್ಯಾರ್ಥಿಗಳೊಂದಿಗೆ ಜೈವಿಕ ಇಂಧನ ಕುರಿತು ಸಂವಾದ ನಡೆಸಿದರು. ನಂತರ ಬಯೋ ಡೀಸೆಲ್ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಯಂತ್ರೋಪಕರಣಗಳು ದುರಸ್ತಿಯಲ್ಲಿ ಇರುವುದನ್ನು ಮನಗಂಡು ಕೂಡಲೇ ತಂತ್ರಜ್ಞಾನರನ್ನು ಕಳುಹಿಸಿ ದುರಸ್ತಿ ಮಾಡಿಸಿ ಕೊಡುವುದಾಗಿ ಭರವಸೆ ನೀಡಿದರು. ಸ್ಥಳದಲ್ಲಿಯೇ ಮಂಡಳಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.