ಜಿಲ್ಲೆ

ಸರ್ಕಾರ ಖರೀದಿ ಕೇಂದ್ರ ಆರಂಭಿಸಲಿ

ಬಳ್ಳಾರಿ : ಪ್ರಸ್ತಕ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು, ಕಾಳು, ಉದ್ದಿನ ಕಾಳು, ನೆಲಗಡಲೆ (ಶೇಂಗಾ), ಸೋಯಾ ಬಿನ್ ಹಾಗೂ ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆ ಖರೀದಿಸಲು ನಿರ್ದೇಶನ ನೀಡಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್.ಗುರುಲಿಂಗನಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬೆಂಬಲ ಬೆಲೆ ಯೋಜನೆಗೆ ರಾಜ್ಯವೂ ನೆರವು ನೀಡಬೇಕು. ತಕ್ಷಣ ಜಿಲ್ಲಾವಾರು ಖರೀದಿ ಕೇಂದ್ರ ತೆರೆದು ಧಾನ್ಯ ಖರೀದಿ ಪ್ರಕ್ರಿಯೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು. ರೈತರ ಸಂಕಷ್ಟಗಳಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಗಮನ ಸೆಳೆಯುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಾರ್ಯ ಶ್ಲಾಘನೀಯ ಎಂದರು.