ಜಿಲ್ಲೆ

ಸಚಿವ ಸಂತೋಷ್ ಎಸ್.ಲಾಡ್ ಜಿಲ್ಲಾ ಪ್ರವಾಸ

ಬಳ್ಳಾರಿ : ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಜು 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಅಂದು ವಿಜಯನಗರ ಜಿಲ್ಲೆಯಿಂದ ನಗರಕ್ಕೆ ಆಗಮಿಸಿ, ಬೆಳಗ್ಗೆ 11 ಗಂಟೆಗೆ ವಾಲ್ಮೀಕಿ ಭವನದಲ್ಲಿ ಆಯೋಜಿಸಿರುವ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬಳಿಕ ಮಧ್ಯಾಹ್ನ 02 ರಿಂದ ಸಂಜೆ 06 ಗಂಟೆಯವರೆಗೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಮತ್ತು ಮುಖಂಡರೊಂದಿಗೆ ಸಂವಾದ ನಡೆಸಲಿದ್ದಾರೆ.

--------------