ಜಿಲ್ಲೆ

ಗಂಡಾಂತರ ಗರ್ಭೀಣಿಯರ ನಿಗಾವಹಿಸಿ

ಬಳ್ಳಾರಿ : ಜಿಲ್ಲೆಯಲ್ಲಿನ ಗಂಡಾಅತರ ಗಂಡಾಂತರ ಗರ್ಭೀಣಿಯರ ಮೇಲೆ ನಿರಂತರ ನಿಗಾ ವಹಿಸುವ ಮೂಲಕ ತಾಯಿ-ಶಿಶು ಮರಣ ಸಂಭಂವಿಸದಂತೆ ವೈದ್ಯಾಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಡಿಸಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು.

ಇಲ್ಲಿನ ಡಿಸಿ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ತಾಯಿ ಮತ್ತು ಶಿಶು ಮರಣ ತಡೆಗಟ್ಟುವಿಕೆ ಕುರಿತ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಗಂಡಾಂತರ ಗರ್ಭಿಣಿ ಮಹಿಳೆಯರಿಗೆ ರಕ್ತಹೀನತೆ, ಪೌಷ್ಠಿಕ ಆಹಾರದ ಕೊರತೆ, ಕಬ್ಬಿಣಾಂಶ ಮಾತ್ರೆಗಳ ಸೇವನೆ ಕುರಿತು ಆಶಾಕಾರ್ಯಕರ್ತೆಯರು ಮನೆ ಭೇಟಿ ಸಂದರ್ಭದಲ್ಲಿ ಸೂಚಿಸಬೇಕು. ರಕ್ತಹೀನತೆ ಉಂಟಾಗುವುದು ತಡೆಗಟ್ಟುವ ಮೂಲಕ ಜಿಲ್ಲೆಯಲ್ಲಿ ಸಹಜ ಹೆರಿಗೆಗೆಯೂ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಜಿಪಂ ರಾಹುಲ್ ಶರಣಪ್ಪ ಸಂಕನೂರು ಮಾತನಾಡಿ, ಹೆರಿಗೆಯಾದ ನಂತರವು ನಿಗದಿತ ಕಾಲಾವಧಿಯೊಳಗೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದರೂ ಸಹ ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕೇವಲ ದಿನನಿತ್ಯದ ಔಷಧಿಗಳ ಶಿಫಾರಸ್ಸು ಮಾಡಬಾರದು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಪ್ರತಿ ತಿಂಗಳು 9 ಮತ್ತು 24 ತಾರೀಖಿನಂದು ಆರೋಗ್ಯ ಕೇಂದ್ರಗಳಲ್ಲಿ ಗಭೀಣಿ ಮಹಿಳೆಯರಿಗಾಗಿಯೇ ನೀಡುವ ಜಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಕುರಿತು ಚರ್ಚಿಸಲಾಯಿತು.