ಬಳ್ಳಾರಿ ನಾಲಾ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಅನಿಲ ಅನಗೊಳ್ಕರ, ಸುಭಾಸ ಚೌಗಲಾ, ಹನುಮಂತ ಬಾಳೇಗುಂದ್ರಿ, ಭೈರು ಕಂಗ್ರಾಳ್ಕರ, ಮಹೇಶ ಚತುರ, ರಾಜು ಮರವೆ ಇತರರಿದ್ದರು. 
ಜಿಲ್ಲೆ

ಬಳ್ಳಾರಿ ನಾಲಾ ಅಭಿವೃದ್ಧಿಗೆ ಆಗ್ರಹ

ಶಂಕರ ಗೆಜ್ಜಿ

ಬೆಳಗಾವಿ: ಬಳ್ಳಾರಿ ನಾಲಾ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕಳೆದ ಅನೇಕ ವರ್ಷದಿಂದ ಯಳ್ಳೂರ ರಸ್ತೆಯಿಂದ ಹುದಲಿಯವರೆಗಿನ ಬಳ್ಳಾರಿ ನಾಲಾ ಅಭಿವೃದ್ಧಿ ಕಾಣದ ಪರಿಣಾಮ ಇಲ್ಲಿನ ಸುತ್ತಮುತ್ತಲಿನ ಗ್ರಾಮದ ರೈತರಿಗೆ ತೊಂದರೆಯಾಗುತ್ತಿದೆ. ನಾಲಾನಲ್ಲಿ ಸಾಕಷ್ಟು ಪ್ರಮಾಣದ ಹೂಳು ತುಂಬಿಕೊಂಡು ನೀರು ನಿಂತು ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗುತ್ತಿದೆ. ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರ ಬಳ್ಳಾರಿ ನಾಲಾ ಅವನ್ನು 800 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ, ನಾಲಾ ಅಭಿವೃದ್ಧಿಯಾಗಲಿಲ್ಲ. ಆದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ನಾಲಾ ಅಭಿವೃದ್ಧಿಗೆ ಮುಂದಾಗಬೇಕು ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.