ಜಿಲ್ಲೆ

ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ

Ballari

ಬಳ್ಳಾರಿ: ವಿಮ್ಸ್‌ನಲ್ಲಿ ರೋಗಿಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಮೃತರ ಕುಟುಂಬಗಳಿಗೆ ಪರಿಹಾರ ನೀಡಿ, ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಡಿಸಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಸರ್ಕಾರ ವಿರುದ್ಧ ಕಾಂಗ್ರೆಸ್ ಮುಖಂಡರು ಘೋಷಣೆ ಕೂಗಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ಕೋಟಿಗಟ್ಟಲೇ ಅನುದಾನ ಬಿಡುಗಡೆ ಮಾಡಿದ್ದರೂ ರೋಗಿಗಳನ್ನು ರಕ್ಷಿಸಲು ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವಿಮ್ಸ್ ಆಡಳಿತ ಮಂಡಳಿ ವಿಫಲವಾಗಿದೆ. ಮೃತರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ ನೀಡಬೇಕು. ವಿಮ್ಸ್ ನಿರ್ದೇಶಕರನ್ನು ಅಮಾನತುಗೊಳಿಸಬೇಕು. ಸಂಬಂಧಿತ ಸಚಿವರು ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಶಾಸಕ ಬಿ.ನಾಗೇಂದ್ರ, ಮೇಯರ್ ರಾಜೇಶ್ವರಿ, ಮುಖಂಡರಾದ ನಾರಾ ಭರತ್‌ರೆಡ್ಡಿ, ಜೆ.ಎಸ್.ಆಂಜನೇಯಲು, ರಾವೂರ್ ಸುನೀಲ್, ವೆಂಕಟೇಶ ಹೆಗಡೆ, ಕೊಳಗಲ್ ಅಂಜಿನಿ ಇತರರಿದ್ದರು.