ಜಿಲ್ಲೆ

ನ.14 ರಂದು ಜನಜಾಗೃತಿ ಜಾಥಾ

ಬಳ್ಳಾರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನ.14 ರಂದು ಡಿಎಚ್‌ಒ ಕಚೇರಿ ಆವರಣದಲ್ಲಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜಾಥಾವು ಕಚೇರಿ ಆವರಣದಿಂದ ಆರಂಭವಾಗಿ ಸಂಗಮ್ ವೃತ್ತ, ರಾಘವೇಂದ್ರ ಚಿತ್ರ ಮಂದಿರ ವೃತ್ತ, ಮೀನಾಕ್ಷಿ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಮರಳಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಡಿಎಚ್‌ಒ ಕಚೇರಿಗೆ ತಲುಪಲಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.