ಜಿಲ್ಲೆ

ಶಾಲಾ ಆದ್ಯತೆ ನಮೂದಿಸಲು ಅವಕಾಶ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಮತ್ತು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ(ಸಿಬಿಎಸ್‌ಸಿ) ಶಾಲೆಗಳಿಗೆ 2025-26 ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗೆ ಸಂಬಅಧಿಸಿದಂತೆ ಈಗಾಗಲೇ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಾವು ಪ್ರವೇಶ ಪಡೆಯಲು ಇಚ್ಛಿಸುವ ಜಿಲ್ಲೆಯಲ್ಲಿನ ಶಾಲೆಗಳ ಆದ್ಯತೆಯನ್ನು ನಮೂದಿಸಲು ಮೇ 17 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------