ಬಳ್ಳಾರಿ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೨೦ನೇ ವಾರ್ಷಿಕ ಘಟಿಕೋತ್ಸವವನ್ನು ೨೦೨೫ನೇ ಮಾರ್ಚ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ೨೦೨೦-೨೧ನೇ ಶೈಕ್ಷಣಿಕ ಸಾಲಿನಿಂದ ೨೦೨೩-೨೪ನೇ ಶೈಕ್ಷಣಿಕ ಸಾಲಿನವರೆಗೆ ನಾನಾ ಕೋರ್ಸ್‌ಗಳಲ್ಲಿ ತೇರ್ಗಡೆ ಹೊಂದಿರುವ ಸಿಜಿಸಿಎಸ್ ಮತ್ತು ನಾನ್ ಸಿಬಿಸಿಎಸ್ ಗಳ ಯುಜಿ, ಪಿಜಿ, ಡಿಪ್ರೋಮಾ ಸರ್ಟಿಫಿಕೆಟ್ ಕೋರ್ಸ್‌ಗಳ ವಿದ್ಯಾರ್ಥಿಗಳು ಘಟಿಕೋತ್ಸವ ಶುಲ್ಕ ಪಾವತಿಸಲು ಅಸೂಚನೆ ಹೊರಡಿಸಲಾಗಿದೆ. ಘಟಿಕೋತ್ಸವ ಶುಲ್ಕ ಪಾವತಿಸಲು ಫೆ.೧೦ ಕೊನೆಯ ದಿನವಾಗಿದೆ. ಮಾಹಿತಿಗೆ ಕರಾಮುವಿ ಬಳ್ಳಾರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರ ಕಚೇರಿ ಅಥವಾ ಮೊ.೭೮೯೨೫೯೭೧೫೯ ಗೆ ಸಂಪರ್ಕಿಸಬಹುದು ಎಂದು ಕರಾಮುವಿಯ ಬಳ್ಳಾರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.