ಜಿಲ್ಲೆ

ಇಂದು ಪೂರ್ವಭಾವಿ ಸಭೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಇಲ್ಲಿನ ಬಿಪಿಎಸ್‌ಸಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಜರುಗಲಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಏ.15 ರಂದು ಸಂಜೆ 05 ಗಂಟೆಗೆ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ ಪಾಲ್ಗೂಳಲಿದ್ದಾರೆ. ಜನಪ್ರತಿನಿಧಿಗಳ, ಕನ್ನಡಪರ ಸಾಹಿತ್ಯ-ಸಾಂಸ್ಕೃತಿಕ ಸಂಘಟನೆಗಳ ಹಾಗೂ ವಿವಿಧ ಸಂಘಟನೆಗಳ, ಕಸಾಪ ತಾಲೂಕು ಮತ್ತು ಹೋಬಳಿ ಪದಾಧಿಕಾರಿಗಳ ಸಭೆ ಆಯೋಜಿಸಲಾಗಿದ್ದು ಸಭೆಗೆ ಆಗಮಿಸಿ ಸಮ್ಮೇಳನದ ಯಶಸ್ವಿಯ ಹಿನ್ನೆಲೆಯಲ್ಲಿ ಸಲಹೆ-ಸೂಚನೆ ನೀಡಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

----------