ಬಳ್ಳಾರಿ: ವಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ವೈದ್ಯರು ವಿಮ್ಸ್ ಪ್ರಗತಿ ಬಗ್ಗೆ ಕಾಳಜಿ ತೋರಬೇಕೇ ಹೊರತು ನಿಮ್ಮ ಖಾಸಗಿ ಕ್ಲಿನಿಕ್ ಹಾಗೂ ನರ್ಸಿಂಗ್ ಹೋಮ್‌ಗಳ ಬಗ್ಗೆ ಅಲ್ಲ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿದರು.
ನಗರದ ವಿಮ್ಸ್ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜನರು ಉತ್ತಮ ಚಿಕಿತ್ಸೆ ಸಿಗುತ್ತದೆ ಎಂದು ವಿಮ್ಸ್ ಆಸ್ಪತ್ರೆಗೆ ಬರುತ್ತಾರೆ. ಜನರ ನಿರೀಕ್ಷೆಗಳನ್ನು ಹುಸಿಗೊಳಿಸಬಾರದು. ವಿಮ್ಸ್‌ನಲ್ಲಿ ಕೆಲಸ ಮಾಡುವ ವೈದ್ಯರು ಹಾಗೂ ಸಿಬ್ಬಂದಿಗೆ ಈ ಸಂಸ್ಥೆ ತಾಯಿ ಇದ್ದಂತೆ. ಇದರಿಂದಾಗಿ ಈ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಬೇಕು. ಸಮಸ್ಯೆಗಳನ್ನು ಹೇಳುತ್ತಾ ಕಾಲಹರಣ ವಾಡುವುದು ಸರಿಯಲ್ಲ ಎಂದು ತಾಕೀತು ಮಾಡಿದರು.
ವಿಮ್ಸ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ಕಡತಗಳ ವಾಹಿತಿ ಕೊಡಿ. ನಾನೇ ಮುತುವರ್ಜಿ ವಹಿಸಿ ನನೆಗುದಿಗೆ ಬಿದ್ದಿರುವ ಕೆಲಸಗಳನ್ನು ವಾಡಿಸಿಕೊಡುತ್ತೇನೆ ಎಂದು ಸಚಿವ ಆನಂದ ಸಿಂಗ್ ಹೇಳಿದರು. ವಿಮ್ಸ್ ನಿರ್ದೇಶಕ ಬಿ.ದೇವಾನಂದ ಮಾತನಾಡಿ, ವಿಮ್ಸ್ ಸಿಬ್ಬಂದಿ ಸಂಖ್ಯೆಯಲ್ಲಿ ಸುಧಾರಣೆಯಾಗಿದೆ. ಮೂಲಸೌಕರ್ಯಗಳ ಕೆಲಸ ಬಾಕಿ ಇದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸೈದುಲು ಅದಾವತ್ ಹಾಗೂ ಇತರರಿದ್ದರು.