ಜಿಲ್ಲೆ

ರೈತ ನಾಯಕನಿಗೆ ಬೆಂಬಲಿಸಿ ಪ್ರತಿಭಟನೆ

ಬಳ್ಳಾರಿ : ದೆಹಲಿಯ ಗಡಿಯಲ್ಲಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅಮರಣ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್‌ದಲ್ಲೆವಾಲ ಹೋರಾಟಕ್ಕೆ ಬೆಂಬಲಿಸಿ ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದಿಂದ ಸೋಮವಾರ ಪ್ರತಿಭಟಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ವಿ.ಎಸ್.ಶಿವಶಂಕರ ಮಾತನಾಡಿ, ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿಗೊಳಿಸಬೇಕು. ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಂಜಾಬ್-ಹರಿಯಾಣ ಗಡಿಯಲ್ಲಿ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲರವರು ಅಮರಣಾಂತ ಉಪವಾಸ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಈ ಉಪವಾಸ ಸತ್ಯಾಗ್ರಹ 51ನೇ ದಿನಕ್ಕೆ ಕಾಲಿಟ್ಟಿದೆ. ಜಗಜಿತ್ ಸಿಂಗ್ ದಲ್ಲೇವಾಲರವರ ದೇಹ ನಿತ್ರಾಣಗೊಂಡು, ಮಾಂಸಖಂಡಗಳ ತೂಕವನ್ನು ಕಳೆದುಕೊಂಡಿದ್ದು. ರಕ್ತದೊತ್ತಡ ಕೂಡ ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ. ಯಾವಾಗ ಬೇಕಾದರೂ ಪ್ರಾಣ ಹೋಗುವಂತಹ ಸನ್ನಿವೇಶ ಉಂಟಾಗಿದೆ. ಇಂತಹ ಸ್ಥಿತಿಗೆ ರೈತ ನಾಯಕರ ಪರಿಸ್ಥಿತಿ ತಲುಪಲು ಕೇಂದ್ರ ಸರಕಾರವೇ ನೇರ ಕಾರಣವಾಗಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.