ಜಿಲ್ಲೆ

ಚುನಾವಣೆ ಎದುರಿಸಲು ಸಜ್ಜಾಗಿ

ಬಳ್ಳಾರಿ : ರಾಜ್ಯದಲ್ಲಿ ಮುಂದಿನ ಕೆಲ ತಿಂಗಳಲ್ಲೇ ಜಿಪಂ ಹಾಗೂ ತಾಪಂ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ಕರೆ ನೀಡಿದರು.

ನಗರದ ಸ್ಟಾರ್ ರಾಯಲ್ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ನಗರ ಹಾಗೂ ಗ್ರಾಮೀಣ ಕ್ಷೇತ್ರದ ಪದಾಧಿಕಾರಿಗಳೊಂದಿಗೆ ಸಭೆ ಹಾಗೂ ಹಾಲಿ ರಾಜ್ಯಸಭಾ ಸದಸ್ಯ, ನೂತನ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ.ಸಯ್ಯದ್ ನಾಸೀರ್ ಹುಸೇನ್ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಈ ವರ್ಷ ಸಂಘಟನಾ ವರ್ಷವಾಗಿ ಕೈಗೆತ್ತಿಕೊಂಡಿದೆ. ಬೂತ್, ಗ್ರಾಪಂ ಹಾಗೂ ತಾಪಂ ಮಟ್ಟದಲ್ಲಿ ಶೇ.50%ರಷ್ಟು ಮಹಿಳೆಯರನ್ನು ಒಳಗೊಂಡತೆ ಹತ್ತು ಜನರ ಸಮಿತಿಯನ್ನು ಪದಾಧಿಕಾರಿಗಳು ರಚಿಸಬೇಕು. ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಗಳನ್ನು ಶತಗತಯವಾಗಿ ಗೆಲ್ಲಬೇಕು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ದೇಶದ ಸುಳ್ಳು ಹೇಳಿ ಅಧಿಕಾರ ಪಡೆದುಕೊಂಡಿದೆ. ಆದ್ದರಿಂದ, ದೇಶಾದ್ಯಂತ ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಿದೆ ಎಂದರು.

ಗ್ರಾಮೀಣ ಶಾಸಕ ಬಿ.ನಾಗೇಂದ್ರ ಮಾತನಾಡಿ, ರಾಜ್ಯಸಭಾ ಸಭಾ ನಾಸೀರ್ ಹುಸೇನ್ ಅವರು ಪಕ್ಷದಲ್ಲಿ ನಮಗೆಲ್ಲ ಮಾರ್ಗದರ್ಶಕರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಎಲ್ಲ ಕಾರ್ಯಕರ್ತರೂ ಮೈಗೂಡಿಸಿಕೊಳ್ಳಬೇಕಿದೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಉನ್ನತ ಸ್ಥಾನ ದೊರೆಯಲಿ ಎಂದು ಹಾರೈಸಿದರು.

ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ , ಶಾಸಕ ನಾರಾಭರತರೆಡ್ಡಿ ಮಾತನಾಡಿದರು. ಬಳಿಕ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ವತಿಯಿಂದ ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸೀರ್ ಹುಸೇನ್ ಅವರಿಗೆ ಖಡ್ಗ ನೀಡಿ ಸನ್ಮಾನಿಸಿ ಗೌರವಿಸಲಾಯಿತು.