ಜಿಲ್ಲೆ

ರಕ್ತದಾನದಿಂದ ಜೀವ ಉಳಿಸಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸಬಹುದು ಎಂದು

ಡಿಎಚ್ಒ ಡಾ.ವೈ.ರಮೇಶ ಬಾಬು ಹೇಳಿದರು.

ನಗರದ ಕೌಲಬಜಾರ್ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರಕ್ತ ಸುರಕ್ಷತಾ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಏಡ್ಸ್ ನಿಯಂತ್ರಣ ಘಟಕ ಹಾಗೂ ಸ್ವಾಮಿ ವಿವೇಕಾನಂದ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ಸ್ವಯಂ ಪ್ರೇರಿತ ಉಚಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಜಗತ್ತಿನಲ್ಲಿ ಅತಿ ದೊಡ್ಡ ಸಂಶೋಧನೆ ಎಂದರೆ ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬರ ಜೀವ ಉಳಿಸಲು ಉಪಯೋಗಿಸುವುದಾಗಿದೆ. ಇದರಿಂದ ಹಲವಾರು ಜನರ ಆರೋಗ್ಯವನ್ನು ಸುಧಾರಿಸುವ ಜತೆಗೆ ಸಾವಿನಿಂದ ಪಾರು ಮಾಡಲು ಸಾಧ್ಯವಿದೆ, ಹಾಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದರು.

ಇದೇ ವೇಳೆ ಶ್ರೀರಾಮರಾಜು ಫೌಂಡೇಷನ್ ವತಿಯಿಂದ ಪ್ರತಿ ರಕ್ತದಾನಿಗೂ ಉಚಿತ ಹೆಲ್ಮೆಟ್ ವಿತರಿಸಲಾಯಿತು. ನಂತರ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ 105 ಜನರ ಅಂಗಾಂಗ ದಾನ ನೋಂದಣಿ ಮಾಡಿಸಲಾಯಿತು. ಶಿಬಿರದಲ್ಲಿ ಒಟ್ಟಾರೆ 270 ಜನರು ರಕ್ತದಾನ ಮಾಡಿದರು.