ಜಿಲ್ಲೆ

ವಿಜ್ಞಾನಿಗಳ ನಡೆ ರೈತರ ಕಡೆ ಕಾರ್ಯಕ್ರಮ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಹಾಗೂ ಅದರ ವಿವಿಧ ಅಂಗ ಸಂಸ್ಥೆಗಳು, ಕೃಷಿ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ವಿವಿಧ ಕೃಷಿ ತಾಂತ್ರಿಕತೆಗಳು ಲಭ್ಯವಾಗುವಂತೆ ಮೇ 29 ರಿಂದ ಜೂ 12 ರವರೆಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಪಿ.ಪಾಲಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರ ಬಳಿ ತೆರಳಿ, ಜಿಲ್ಲೆಯ ಎಲ್ಲ ರೈತರಿಗೆ ಗ್ರಾಪಂ ಮಟ್ಟದಲ್ಲಿ ಮಾಹಿತಿ ನೀಡುವರು. ಇಲ್ಲಿ ರೈತರನ್ನು ಒಗ್ಗೂಡಿಸಿ ನೂತನ ತಂತ್ರಜ್ಞಾನ, ಹೊಸ ತಳಿಗಳು ಮತ್ತು ಬೀಜಗಳು, ನಿಖರವಾದ ಹವಾಮಾನದ ಮಾಹಿತಿ ಮತ್ತು ಸರ್ಕಾರದ ವಿವಿಧ ಲಾಭದಾಯಕ ಯೋಜನೆಗಳು, ಕೃಷಿಯಲ್ಲಿ ಹೆಚ್ಚಿನ ಲಾಭವನ್ನು ಹೇಗೆ ಪಡೆಯಬಹುದು ಎಂಬ ಬಗ್ಗೆ ಮಾಹಿತಿ ನೀಡಲಾಗುತ್ತದೆ.

===