ಬಳ್ಳಾರಿ ; ನಿರಂತರ ಮಳೆಯಿಂದ ಬಡಾವಣೆಗಳಲ್ಲಿ ಕುಡಿವ ನೀರಿನ ಮೂಲಗಳ ಸುರಕ್ಷತೆಯು ಜನರ ಆದ್ಯತೆಯಾಗಲಿ ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.
ಇಲ್ಲಿನ ಗೌತಮ್‌ನಗರದ ಕೊಳಚೆ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಪ್ರತಿಯೊಬ್ಬರು ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯುವ ಮೂಲಕ ಸಂಭಾವ್ಯ ವಾಂತಿ ಭೇದಿ ಪ್ರಕರಣಗಳು ಉಂಟಾಗದಂತೆ ಕೈ ಜೋಡಿಸಬೇಕು. ಕಲುಷಿತ ನೀರು ಮತ್ತು ಆಹಾರ ಸೇವನೆಯಿಂದ ಸಾಮಾನ್ಯವಾಗಿ ವಾಂತಿ ಬೇಧಿ ಸೇರಿದಂತೆ ಕಾಲಾರ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತವೆ. ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಕುಡಿವ ನೀರಿನ ಮೂಲಗಳು ಕಲುಷಿತವಾಗುವ ಸಾಧ್ಯತೆ ಇರುತ್ತವೆ ಎಂದರು.
ಮನೆಯ ಮುಂದೆ ನಳದ ಪೈಪ್‌ಗಳು ತಗ್ಗಿನಲ್ಲಿ ಕಂಡುಬರುತ್ತಿದ್ದು, ಇದರಿಂದ ಅನಗತ್ಯ ನೀರು ಸಂಗ್ರಹವಾಗಿ ಪುನಃ ನೀರಿನ ಪೈಪ್‌ಗಳಲ್ಲಿ ವಾಪಾಸ್ಸು ಹೋಗುವ ಮೂಲಕ ನೀರು ಕಲುಷಿತವಾಗುವ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ನಳದ ಪೈಪ್‌ಗಳು ಮನೆಯ ಮುಂದೆ ನೆಲದ ಮೇಲ್ಮಟ್ಟದಲ್ಲಿ ಇರುವಂತೆ ಜಾಗೃತೆ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜಿಲ್ಲಾ ಕಾಲಾರ ನಿಯಂತ್ರಣ ತಂಡ ಈಗಾಗಲೇ ನಿರಂತರವಾಗಿ ನೀರಿನ ಮೂಲಗಳ ಪರೀಕ್ಷೆ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಾಂಕ್ರಾಮಿಕ ರೋಗಗಳಿಂದ ಜಾಗ್ರತೆ ವಹಿಸಬೇಕು. ವಾಂತಿಭೇದಿ ಉಂಟಾದ ಸಂದರ್ಭದಲ್ಲಿ ದೇಹದ ನಿರ್ಜಲೀಕರಣ ತಡೆಯಲು ಓಆರ್‌ಎಸ್ ಜೀವಜಲ ದ್ರಾವಣವು ಅತ್ಯಂತ ಪರಿಣಾಕಾರಿಯಾಗಿದೆ ಎಂದರು.
ನಿರಂತರ ಮಳೆಯಿಂದ ಬಡಾವಣೆಗಳಲ್ಲಿ ಕುಡಿವ ನೀರಿನ ಮೂಲಗಳ ಸುರಕ್ಷತೆಯು ಜನರ ಆದ್ಯತೆಯಾಗಲಿ ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.