ಜಿಲ್ಲೆ

ವಿಶೇಷ ಆಯ್ಕೆ ಶಿಬಿರಗಳು

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಗ್ರಾಮೀಣ ಭಾಗದ ಬಾಲಕ ಮತ್ತು ಬಾಲಕಿಯರಿಗೆ ಮತ್ತೊಂದು ವಿಶೇಷ ಅವಕಾಶವನ್ನು ನೀಡುವ ದೃಷ್ಟಿಯಿಂದ ಪ್ರಸ್ತಕ ಸಾಲಿನಲ್ಲಿ ವಿಶೇಷ ಆಯ್ಕೆ ಶಿಬಿರವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.

ಏ.15 ರಂದು ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ವಾಲಿಬಾಲ್, ಫೆನ್ಸಿಂಗ್, ಆರ್ಚರಿ ಹಾಗೂ ಧಾರವಾಡದ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್ ವಾಲಿಬಾಲ್, ಸೈಕ್ಲಿಂಗ್, ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ ಮತ್ತು ಕಬ್ಬಡಿ, ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಪುಟ್ಬಾಲ್, ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ, ಹಾಕಿ, ತುಮಕೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಮ್ನಾಸ್ಟಿಕ್ಸ್, ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ ಆಯ್ಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.

ಅದೇ ರೀತಿ ಏ.17 ರಂದು ಕಲಬುರಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ವಾಲಿಬಾಲ್, ಕಬಡ್ಡಿ, ಬೀದರ್ ನ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕ್ಲಿಂಗ್, ಬಳ್ಳಾರಿಯ ಪುಟ್ಬಾಲ್ ಕ್ರೀಡಾಂಗಣದಲ್ಲಿ ಪುಟ್ಬಾಲ್, ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಕಿ, ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜುಡೋ ತರಬೇತಿ ಆಯ್ಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಮಾಹಿತಿಗೆ ಯುವ ಸಹಾಯವಾಣಿ ಸಂಖ್ಯೆ: 155265 ಅಥವಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.