ಜಿಲ್ಲೆ

ಮುಂಜಾಗ್ರತಾ ಕ್ರಮ ಕೈಗೊಳ್ಳಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಜಿಲ್ಲೆಯಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯುವ ರೈತರು ಸಸಿ ಕೊಳೆ ರೋಗ ಕಂಡುಬಂದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುವ ಸಂಭವವಿರುವುದರಿಂದ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿ ಮೆಣಸಿನಕಾಯಿ ಬೆಳೆಯಲ್ಲಿ ಸಸಿ ಕೊಳೆಯುವ ರೋಗ ಕಾಣಿಸಿಕೊಳ್ಳುತ್ತದೆ. ಹಾಗಾಗಿ ರೈತರು ಕೆಳಕಂಡಂತೆ ಸೂಕ್ತ ಮುಂಜಾಗ್ರತೆ ಮತ್ತು ನಿರ್ವಹಣೆ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.

====