ಜಿಲ್ಲೆ

ಮುನ್ನಚರಿಕೆ ವಹಿಸಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಸಾಮಾನ್ಯವಾಗಿ ಆರಂಭದ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಮಳೆಗಾಲದಲ್ಲಿ ಕಂಡುಬರುವ ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಪ್ಪಿಸಲು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ತಿಳಿಸಿದ್ದಾರೆ.

ಮೇ ತಿಂಗಳಿನಲ್ಲಿ ಕಂಡುಬರುವ ಮಳೆಗಾಲದ ಆರಂಭದ ಹಂತದಲ್ಲಿ ತೀವ್ರತರದ ಗುಡುಗು-ಸಿಡಿಲು ಕಂಡುಬರುವುದು ಸಾಮಾನ್ಯವಾಗಿದ್ದು, ಜೊತೆಗೆ ಬಿರುಸಾಗಿ ಗಾಳಿ ಸಹಿತ ಮಳೆ ಕಂಡುಬರುವುದು ವಾಡಿಕೆಯಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಿಡಿಲು ಸಹಿತ ಮಳೆ ಕಂಡುಬರುತ್ತಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

===