ಬಳ್ಳಾರಿ : ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಡೆಂೆ ಹರಡುವ ಸಾಧ್ಯತೆಯಿದ್ದು ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ಜಿಲ್ಲಾ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಹೇಳಿದರು.
ನಗರದ ಕೌಲಬಜಾರ್‌ನಲ್ಲಿ ವೈದ್ಯಾಧಿಕಾರಿಗಳೊಂದಿಗೆ ಗುರುವಾರ ಮನೆಗಳಿಗೆ ಭೇಟಿ ನೀಡಿ ನೀರಿನ ಪರಿಕರಗಳನ್ನು ಪರಿಶೀಲಿಸಿ ಮಾತನಾಡಿದರು. ಮಕ್ಕಳು, ಗರ್ಭಿಣಿಯರು ಹಾಗೂ ವಯೋವೃದ್ಧರು ನಿರ್ಲಕ್ಷೃ ವಹಿಸದೆ ವ್ಶೆದ್ಯರಿಂದ ತಪಾಸಣೆಗೆ ಒಳಪಡಬೇಕು. ಮನೆಯಲ್ಲಿನ ನೀರಿನ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ಮತ್ತು ಮನೆಯ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಸಾಮಾನ್ಯ ಜ್ವರವೆಂದು ನಿರ್ಲಕ್ಷೃ ಮಾಡಬಾರದು. ಡೆಂೆ ಸಂಬಂಧಿತ ಜ್ವರವಾಗಿದ್ದರೆ ರೋಗಿಯ ರಕ್ತಕಣಗಳು ಕಡಿಮೆಯಾಗುವುದರಿಂದ ಆರೋಗ್ಯ ಸಮಸ್ಯೆ ಎದುರಾಗಿ ರಕ್ತಸ್ರಾವದಂತಹ ಗಂಭೀರ ಸಮಸ್ಯೆ ಎದುರಿಸಬೇಕಾಗಬಹುದು. ಹಾಗಾಗಿ ಯಾರಿಗಾದರೂ ಮೂರು ದಿನಗಳವರೆಗೆ ಕಡಿಮೆಯಾಗದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ನಿರ್ಲಕ್ಷೃ ವಹಿಸದೆ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು ಎಂದರು.