ಜಿಲ್ಲೆ

ಬಳ್ಳಾರಿ, ಉಪಚುನಾವಣೆ ರಾಜಕೀಯ ದಿಕ್ಸೂಚಿ ಬದಸಲಿದೆ

ಬಳ್ಳಾರಿ : ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶದಿಂದ ರಾಜ್ಯ ರಾಜಕೀಯ ದಿಕ್ಕು ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.

ಸಂಡೂರಿನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಿಗ್ಗಾವಿ , ಸಂಡೂರು ‌ಹಾಗೂ ಚೆನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ ಸರ್ಕಾರ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು ವಿವಿಧ ಹಗರಣಗಳನ್ನು ಬಿಜೆಪಿ ಬಯಲಿಗೆ ಎಳೆದಿದೆ. ಮುಡಾ ಹಗರಣದಲ್ಲಿ ಸಿಎಂ 14 ನಿವೇಶನ ವಾಪಸ್ ನೀಡಿ ತಪ್ಪು ಒಪ್ಪಿಕೊಂಡಿದ್ದಾರೆ. ಇದರಂತೆ ವಾಲ್ಮೀಕಿ ಹಗರಣದಲ್ಲಿ ಆರಂಭದಲ್ಲಿ ಅಕ್ರಮ ನಡೆದಿಲ್ಲ ಎಂಬುದಾಗಿ ಹೇಳಿ ಬಳಿಕ 87 ಕೋಟಿ ರೂ. ಅಕ್ರಮವಾಗಿದೆ ಎಂದು ಸಿಎಂ ಒಪ್ಪಿಕೊಂಡರು. ಸರ್ಕಾರ ಹಾಗೂ ಸಿಎಂ ವಿರುದ್ಧ ಸಾರ್ವಜನಿಕರು ಅಕ್ರೋಶ ಹೊರ ಹಾಕುತ್ತಿದ್ದಾರೆ. ಕಾಂಗ್ರೆಸ್ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಚುನಾವಣೆ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ 18 ರಿಂದ 20 ಸೀಟು ಗೆಲ್ಲುತ್ತೀವಿ ಅಂತಾ ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆದರು. ಆದರೆ, ಹೆಚ್ಚು ಬಿಜೆಪಿ ಜೆಡಿಎಸ್‌ಗೆ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ ಶಾಸಕರು ತಲೆ ಎತ್ತಿ ಓಡಾಡುವಂತಿಲ್ಲ. ಮಾಜಿ ಸಚಿವ ಶ್ರೀರಾಮುಲು ಅವರಿಗೆ ಅಸಮಾಧಾನ ಇಲ್ಲ. ಮಾಜಿ ಶಾಸಕ ಸಿಪಿವೈ ಯೋಗಿಶ್ವರ ಮುಗಿದ ಅಧ್ಯಾಯ. ಸದ್ಯ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಬೆಲೆಕೇರೆ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಿದೆ ಎಂದರು. ಸರ್ಕಾರದ ವಿರುದ್ಧ ಸ್ವತಃ ಸಚಿವ ಆರ್. ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದು ಅಲ್ಲದೆ, ಶಾಸಕರ ವಿರೋಧ ಎದುರಿಸುತ್ತಿದೆ. ಶಾಸಕ ಎಸ್.ಟಿ. ಸೋಮಶೇಖರ್ ತಮ್ಮ‌ಜತೆಗೆ ಶಾಸಕರಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಉಪ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಪರಿಸ್ಥಿತಿ ಗೊತ್ತಗಲಿದೆ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.