ಜಿಲ್ಲೆ

ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ಜಿಲ್ಲೆಯಲ್ಲಿ ಅಭಿವೃದ್ಧಿಗೆ ಪೂರಕವಾಗಿ ಸಾಕಷ್ಟು ಯೋಜನೆ-ಕಾರ್ಯಗಳು ನಡೆಯುತ್ತಿವೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ವಿವಿಧ ಅನುದಾನಗಳಡಿ ಸುಮಾರು 2 ಸಾವಿರ ಕೋಟಿ ರೂ. ಕಾಮಗಾರಿಗಳು ನಡೆದಿದ್ದು, ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು.

ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಪ್ರತ್ಯೇಕವಾಗಿ ಮೀಸಲಿಟ್ಟಿದ್ದು, ಆ ಜಿಲ್ಲೆಗಳಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಕಟ್ಟಡ ಕಾಮಗಾರಿಗಳಿಗೆ ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರವು ಜನ ಸಾಮಾನ್ಯರಿಗೆ ಅತ್ಯುತ್ತಮ ಆಡಳಿತ ನೀಡಲು ಮುಂದಾಗಿದ್ದು, ಈ ಕುರಿತು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಇ-ಖಾತಾ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಶೇ.50 ರಷ್ಟು ಪ್ರಗತಿ ಸಾಧಿಸಲಾಗಿದೆ. ಜಿಲ್ಲೆಯಲ್ಲಿಯೇ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು. ಈ ಭಾಗದ ತುಂಗಭದ್ರಾ ಅಣೆಕಟ್ಟಿನ 19 ನೇ ಕ್ರಸ್ಟ್‌ಗೇಟ್ ಅಳವಡಿಕೆ ಕುರಿತಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

====