ಜಿಲ್ಲೆ

ಇಂದು ಪುನಶ್ಚೇತನ ತರಬೇತಿ ಕಾರ್ಯಕ್ರಮ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಇಲ್ಲಿನ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 1ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ

ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ರಾಜ್ಯ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದೊಂದಿಗೆ ಆ.31 ರಂದು ಬೆಳಗ್ಗೆ 10 ಗಂಟೆಗೆ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ನ್ಯಾಯಾಂಗ ಅಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.