ಜಿಲ್ಲೆ

ಒಆರ್‌ಎಸ್, ಜಿಂಕ್ ಮಾತ್ರೆ ಬಳಸಿ

ಬಳ್ಳಾರಿ ; ಮಕ್ಕಳಲ್ಲಿ ಅತಿಸಾರ ಭೇದಿ ಕಂಡುಬಂದಲ್ಲಿ ಒಆರ್‌ಎಸ್ ದ್ರಾವಣ ಹಾಗೂ ಜಿಂಕ್ ಮಾತ್ರೆ ಬಳಸಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.

ಇಲ್ಲಿನ ಬಸಮ್ಮ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅತಿಸಾರ ಭೇದಿಯು ಹುಟ್ಟಿನಿಂದ 5 ವರ್ಷದೊಳಗಿನ ಮಕ್ಕಳ ಮರಣ ಕಾರಣಗಳಲ್ಲಿ ಒಂದಾಗಿದೆ. ಶೇ. 10 ರಷ್ಟು ಇದರಿಂದ ಮರಣ ಹೊಂದುತ್ತಾರೆ. ಈ ಹಿನ್ನಲೆಯಲ್ಲಿ ಒಆರ್‌ಎಸ್ ದ್ರಾವಣ ಹಾಗೂ ಜಿಂಕ್ ಮಾತ್ರೆಯನ್ನು 14 ದಿನಗಳವರೆಗೆ ನೀಡುವ ಮೂಲಕ ಮಗುವಿನ ಆರೋಗ್ಯ ಕಾಪಾಡುವ ಅತಿಸಾರ ಭೇದಿಯನ್ನು ಬಹು ಸುಲಭವಾಗಿ ನಿಯಂತ್ರಿಸಬಹುದಾಗಿದೆ ಎಂದರು.

ಶಾಲಾ ಮುಖ್ಯಗುರು ರಾಜಶೇಖರ ಮಾತನಾಡಿ, ಈ ಶಾಲೆಯಲ್ಲಿ 600ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ವೈಯಕ್ತಿಕ ಶುಚಿತ್ವದ ಕಾರ್ಯಕ್ರಮ ನಮ್ಮ ಶಾಲೆಯಲ್ಲಿ ಹಮ್ಮಿಕೊಳ್ಳುವ ಮಕ್ಕಳಿಗೆ ಜಾಗೃತಿ ನೀಡುವ ಆರೋಗ್ಯ ಇಲಾಖೆಯ ಕಾರ್ಯ ಶ್ಲಾಘನಿಯ ಎಂದರು.