ಜಿಲ್ಲೆ

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ನವಜಾತು ಶಿಶುಗಳಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪಾಲಕರು ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಮಾತನಾಡಿದರು. ಸಹಾಯಕವಾಗುವ ಲಸಿಕೆಗಳನ್ನು ತಪ್ಪು ನಂಬಿಕೆ ಹೊಂದಿದ ಪಾಲಕರಿಗೆ ಸರಿಯಾದ ಮಾಹಿತಿ ನೀಡಿ ಲಸಿಕೆ ಹಾಕಿಸುವ ಮೂಲಕ ಜಿಲ್ಲಾದ್ಯಂತ ಲಸಿಕಾ ಅಭಿಯಾನ ಯಶಸ್ವಿಗೊಳಿಸಬೇಕು. ಜಾಗತಿಕ ಲಸಿಕಾ ಸಪ್ತಾಹದ ಅಂಗವಾಗಿ ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ಆಯೋಜಿಸುವ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿ ಲಸಿಕೆ ಹಾಕಿಸಲು ವೈದ್ಯಾಧಿಕಾರಿಗಳಿಗೆ ತಿಳಿಸಿದರು.

ಹಾವು ಹಾಗೂ ನಾಯಿ ಕಡಿತದ ಲಸಿಕೆಯನ್ನು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನು ಇಡಲು ಸೂಚಿಸಿದರು. ಡೆಂೆ ರೋಗ ನಿಯಂತ್ರಣಕ್ಕಾಗಿ ಇನ್ನೂ ಹೆಚ್ಚಿನ ಜಾಗೃತಿ ನೀಡಲು ಹಾಗೂ ಮಲೇರಿಯಾ, ಜೆಇ ಪ್ರಕರಣಗಳನ್ನು ನಿಯಂತ್ರಿಸಬೇಕು.

ರಕ್ತದಾನ ಪ್ರಸ್ತುತ ವರ್ಷ ದಾಖಲೆ ಪ್ರಮಾಣದಲ್ಲಿ 20,278 ಯುನಿಟ್ ರಕ್ತ ಸಂಗ್ರಹಿಸಿದ್ದು, ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ರಕ್ತ ಕೊರತೆಯಾಗದಂತೆ ತಿಳಿಸಿದರು.