ಬಳ್ಳಾರಿ ; ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರ ಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡ ಹಿನ್ನೆಲೆ ನಗರಕ್ಕೆ ಆಗಮಿಸಿದ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಯನ್ನು ಸಮುದಾಯದ ಮುಖಂಡರು ಹಾಗೂ ಜಿಲ್ಲಾಡಳಿತದಿಂದ ಮಂಗಳವಾರ ಸ್ವಾಗತಿಸಿದರು..
ಬಳಿಕ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವಾದಿ ಶರಣರ ರಥಯಾತ್ರೆಗೆ ಪೂಜೆ ಸಲ್ಲಿಸಿ ಪುಷ್ಪನಮನಗೈದು, ಗೌರವ ಸಮರ್ಪಿಸಲಾಯಿತು. ಇದೇ ಏ.29 ಮತ್ತು 30ರಂದು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಅನುಭವ ಮಂಟಪ-ಬಸವಾದಿ ಶರಣ ವೈಭವ ಕಾರ್ಯಕ್ರಮದ ಅಂಗವಾಗಿ ರಥಯಾತ್ರೆ ಆಯೋಜಿಸಲಾಗಿದ್ದು, ನಗರಕ್ಕೆ ಆಗಮಿಸಿದ ರಥಯಾತ್ರೆಯು ಸಿರುಗುಪ್ಪ ಮೂಲಕ ರಾಯಚೂರು ಜಿಲ್ಲೆಗೆ ರಥಯಾತ್ರೆಯು ತೆರಳಿತು.
ಜಗತ್ತಿನ ಪ್ರಪ್ರಥಮ ಸಂಸತ್ತು ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥದಲ್ಲಿ ಬಸವಣ್ಣ ಅವರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಭಗವಾನ್ ಗೌತಮ ಬುದ್ಧ, ಶಿವಶರಣೆ ಅಕ್ಕಮಹಾದೇವಿ, ಸಂತ ಶಿಶುನಾಳ ಶರೀಪ, ಗುರುನಾನಕ್, ಭಗವಾನ್ ಮಹಾವೀರ, ನಾರಾಯಣ ಗುರು, ಯೇಸು ಕ್ರಿಸ್ತರ ಪ್ರತಿಮೆಗಳನ್ನು ಅಳವಡಿಸಲಾಗಿದೆ.