ಜಿಲ್ಲೆ

ಸಮಾಜದ ಏಳಿಗೆಗಾಗಿ ಶ್ರಮಿಸಿದವರು

ಬಳ್ಳಾರಿ : ಪದ್ಮಭೂಷಣ ಶ್ರೀಡಾ.ಶಿವಕುಮಾರ ಸ್ವಾಮೀಜಿ ಸಮಾಜದ ಏಳಿಗೆಗಾಗಿ ಶ್ರಮಿಸಿದವರು. ಅವರ ಆದರ್ಶ ಸಾಧನೆಗಳು ನಾಡಿನ ಹಿರಿಮೆಯನ್ನು ಹೆಚ್ಚಿಸಿವೆ ಎಂದು ಬಾದನಹಟ್ಟಿ ಕರಿಬಸವ ಸ್ವಾಮೀಜಿ ಹೇಳಿದರು.

ಪಟ್ಟಣದ ರಾಘವಾಂಕ ಸ್ವಾಮಿ ಮಠದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತ್ರಿವಿಧ ದಾಸೋಹಿ ಶ್ರೀಶಿವಕುಮಾರ ಸ್ವಾಮೀಜಿ ಅವರ ಆರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರ ಕಾಯಕದ ಮಹತ್ವವನ್ನು ಇಂದಿನ ಆಧುನಿಕ ಯುಗದಲ್ಲಿ ಮೈಗೂಡಿಸಿಕೊಂಡು ಅವರ ಹಾದಿಯಲ್ಲೇ ಬದುಕಿ ಸಮಾಜಕ್ಕೆ ಬೆಳಕಾದ ಮಹಾನ್ ಚೇತನ ಶಿವಕುಮಾರ ಸ್ವಾಮೀಜಿ. ಅವರ ತತ್ವ ಸಿದ್ಧಾಂತಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಂಡು ಮುಂದಾಗಬೇಕಿದೆ ಎಂದರು.