ಜಿಲ್ಲೆ

ವಜಾಗೊಳಿಸಿರುವ ಆದೇಶ ಹಿಂಪಡೆಯಿರಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : 60 ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಿರುವ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಇಲ್ಲಿನ ರಾಬಕೊವಿ ಕಚೇರಿ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ಮತ್ತು ಸಿಐಟಿಯು ಸಂಘಟನೆಯಿಂದ ಬುಧವಾರ ಪ್ರತಿಭಟನೆ ನಡೆಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಜೆ.ಸತ್ಯಬಾಬು ಮಾತನಾಡಿ, ಕಳೆದ 15 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವಿವಿದ ವಿಭಾಗದಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕೆಎಂಎ್ ಆಡಳಿತ ಮಂಡಳಿ ಅವರು ಕಾರ್ಮಿಕ ಕಾಯಿದೆಗಳನ್ನು ಗಾಳಿಗೆ ತೂರಿ, ಉತ್ಪಾದನಾ, ತಾಂತ್ರಿಕ, ಆಡಳಿತ, ಸಾರಿಗೆ ವಿಭಾಗ ಸೇರಿದಂತೆ ಇತರೆ ವಿಭಾಗಗಳಲ್ಲಿ ಕಾರ್ಯನಿರ್ವಹಿಸುವ 60 ಜನ ಕಾರ್ಮಿಕರನ್ನು ವಜಾ ಮಾಡಿರುವ ಕಾರ್ಮಿಕ ವಿರೋಧ ಆಡಳಿತ ಮಂಡಳಿ ವಿರುದ್ದ ಅನಿರ್ಧಿಷ್ಟಾವಧಿ ಹೋರಾಟವನ್ನು ಪ್ರಾರಂಭಿಸಲಾಗಿದೆ. ನಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವ ತನಕ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು. ಪ್ರಗತಿ ಪರ, ರೈತ, ದಲಿತ, ಕಾರ್ಮಿಕ ಸಂಘಟನೆಗಳು ಬೆಂಬಲವನ್ನು ಸೂಚಿಸಿವೆ ಎಂದು ತಿಳಿಸಿದರು.