ಜಿಲ್ಲೆ

ಶಾಲಾಭಿವೃದ್ಧಿಗೆ ಸರ್ವರ ಸಹಕಾರ :ಬೆಳ್ತಂಗಡಿ ಪ್ರಾಥಮಿಕ ಶಾಲೆಯಲ್ಲಿ ಉಮೇಶ್ ಶೆಟ್ಟಿ ಹೇಳಿಕೆ

ಬೆಳ್ತಂಗಡಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿರುವುದು ಹೆಮ್ಮೆಯ ವಿಚಾರ. ಈಗ ಶಾಲೆಯಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚಾಗಿದ್ದು, ಜತೆಯಲ್ಲಿ ಪಾಲಕರಿಂದಲೂ ಸಹ ಹೆಚ್ಚಿನ ಶಿಕ್ಷಕರ ವ್ಯವಸ್ಥೆ ಮಾಡಲಾಗಿದ್ದು, ಸರ್ವರ ಸಹಕಾರದೊಂದಿಗೆ ಶಾಲಾ ಅಭಿವೃದ್ಧಿಗೆ ಎಲ್ಲರೂ ಶ್ರಮಿಸುವುದಾಗಿ ಉಮೇಶ್ ಶೆಟ್ಟಿ ಹೇಳಿದರು.

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆರಂಭೋತ್ಸವದಲ್ಲಿ ಮಾತನಾಡಿದರು. ಹೊಸ ವಿದ್ಯಾರ್ಥಿಗಳಿಗೆ ಹೂ ನೀಡಿ ಬರಮಾಡಿಕೊಳ್ಳಲಾಯಿತು. ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಿಸಲಾಯಿತು. ಶಾಲಾ ಹಳೇ ವಿದ್ಯಾರ್ಥಿ ಸಂಘ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ನೀನಾಕುಮಾರ್ ಮತ್ತು ಸದಸ್ಯರು ಹಾಗೂ ಮುಖ್ಯಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯರು, ಶಾಲಾ ಶಿಕ್ಷಕರು, ಪಾಲಕರು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.