ಜಿಲ್ಲೆ

ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ಎ. ಆರ್. ರಘುರಾಮ

ಬೇಲೂರು : ಜನಸ್ನೇಹಿ ಆಡಳಿತ ಜಾರಿಗೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರದ ಗೃಹ ಇಲಾಖೆ ಸೂಚನೆಯಂತೆ ‘ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಕಾರ್ಯಕ್ರಮಕ್ಕೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಚಾಲನೆ ನೀಡಲಾಯಿತು. ಅರೇಹಳ್ಳಿ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಂಡಿದ್ದ ಜಾಥಾದಲ್ಲಿ ಮಾತನಾಡಿದ ಪಿಎಸ್‌ಐ ಶೋಭಾ ಭರಮಣ್ಣ, ಸಾರ್ವಜನಿಕರ ಕುಂದು ಕೊರತೆಗಳನ್ನು ಮನೆ ಆವರಣದಲ್ಲೇ ಆಲಿಸಿ ಸಮಸ್ಯೆಗಳಿಗೆ ಪರಿಹಾರ ನೀಡಲು

ರಾಜ್ಯ ಸರ್ಕಾರ ವಿನೂತನ ಕಾರ್ಯಕ್ರಮ ಜಾರಿಗೊಳಿಸಿದೆ ಎಂದರು. ಈ ಕಾರ್ಯಕ್ರಮ ಪರಿಪೂರ್ಣವಾಗಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಮುಂಬರುವ ದಿನಗಳಲ್ಲಿ ಮನೆ ಮನೆಗೆ ಸ್ಥಳೀಯ ಪೊಲೀಸರು ಬಂದಾಗ ಜನರು ಯಾವುದೇ ಸಮಸ್ಯೆಗಳಿದ್ದರೂ ನಿರ್ಭೀತಿಯಿಂದ ವಿವರಿಸಬೇಕು.

ಜನರ ಸಮಸ್ಯೆಗಳನ್ನು ಸಾಧ್ಯವಾದಷ್ಟೂ ಮನೆಯ ಬಾಗಿಲಿನಲ್ಲಿಯೇ ಬಗೆ ಹರಿಸುತ್ತೇವೆ ಎಂದು ಅವರು ಭರವಸೆ

ನೀಡಿದರು. ಪೊಲೀಸರ ಹಾಗೂ ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ವೃದ್ಧಿಗೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಇದು ಉತ್ತಮ ಅವಕಾಶ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದು ಸಹಕಾರಿಯಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇಲಾಖೆಯೊಂದಿಗೆ ಸ್ಪಂದಿಸಬೇಕು. ಶಾಂತಿ, ಸುವ್ಯವಸ್ಥೆ ಪಾಲನೆಗೆ ಎಲ್ಲರೂ ಹೆಚ್ಚಿನ ಸಹಕಾರ ನೀಡಬೇಕು.

ಯಾವುದೇ ರೀತಿಯ ತಂಟೆ, ತಕರಾರು, ಸಮಸ್ಯೆ, ಭಯ ನಿವಾರಣೆಗೆ ಪೊಲೀಸ್ ಇಲಾಖೆ ಸಿಬ್ಬಂದಿ ಸಂಪೂರ್ಣ ಸ್ಪಂದನೆ ನೀಡಲಿದೆ ಎಂದು ಅವರು ನುಡಿದರು. ಅರೇಹಳ್ಳಿ ಪೊಲೀಸ್ ಠಾಣೆ ಎಎಸ್‌ಐ ಮಂಜುನಾಥ್, ಸಿಬ್ಬಂದಿ ಪುಟ್ಟಸ್ವಾಮಿ, ಅಶೋಕ್, ಪೃಥ್ವಿ, ಅವಿನಾಶ್, ದರ್ಶನ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.