ವಿಜಯಪುರದ ವಾರ್ಡ್ ನಂ. 29 ರ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಪರ ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮತಯಾಚಿಸಿದರು. ರಮೇಶ ಗುಬ್ಬೇವಾಡ, ಎಂ.ಬಿ. ಮೆಂಡೆಗಾರ, ಸುಜಾತಾ ಕಳ್ಳಿಮನಿ ಮತ್ತಿತರರಿದ್ದಾರೆ. 
ಜಿಲ್ಲೆ

ಪಂಚ ಗ್ಯಾರಂಟಿಯಿಂದ ಜನತೆಗೆ ಅನುಕೂಲ

ದತ್ತಾತ್ರೇಯ ಪಿ ಕುಲಕರ್ಣಿ

ವಿಜಯಪುರ: ವಾರ್ಡಿನ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.

ಇಲ್ಲಿನ ಮಹಾನಗರ ಪಾಲಿಕೆ ವಾರ್ಡ್ ನಂ. 29 ರ ಉಪ ಚುನಾವಣೆ ಹಿನ್ನೆಲೆ ಮಂಗಳವಾರ ವಾರ್ಡ್ ವ್ಯಾಪ್ತಿಯ ರಾಮನಗರ, ರಾಜಾಜಿ ನಗರ, ನೆಹರು ನಗರ, ಲಕ್ಷ್ಮಣ ನಗರ, ನವರಸಪೂರ ಕಾಲನಿ, ಅಹ್ಮದ ನಗರ ಏರಿಯಾಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಾಬು ಯಳಗಂಟಿ ಪರ ಪಾದಯಾತ್ರೆ ಮೂಲಕ ಮತಯಾಚನೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡುವ ಮೂಲಕ ಎಲ್ಲರಿಗೂ ಅನುಕೂಲ ಮಾಡಿದೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಹೆಚ್ಚಿನ ಶಕ್ತಿ ನೀಡಲು ಮತ್ತು ಹಲವು ಜನಪರ ಯೋಜನೆ ಜಾರಿಗೆ ತರಲು ಮುಂಬರುವ ಮಹಾನಗರ ಪಾಲಿಕೆಯ ವಾರ್ಡ್ ನಂ. 29 ರ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.

ಬಿಡಿಎ ಅಧ್ಯಕ್ಷ ಕನ್ನಾನ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಸುಭಾಷ ಕಾಲೇಬಾಗ, ಡಾ. ರವಿ ಬಿರಾದಾರ, ಮಹಾದೇವಿ ಗೋಕಾಕ, ಜಯಶ್ರೀ ಭಾರತೆ, ರಮೇಶ ಗುಬ್ಬೇವಾಡ, ವಿದ್ಯಾರಾಣಿ ತುಂಗಳ, ಅಮೀತ ಚವಾಣ, ದೇವಾನಂದ ಲಚ್ಯಾಣ, ಎಂ.ಬಿ. ಮೆಂಡೆಗಾರ, ಸುಜಾತಾ ಕಳ್ಳಿಮನಿ, ಪಾಲಿಕೆಯ ಸದಸ್ಯರಾದ ಆರತಿ ಶಹಾಪೂರ, ಅಪ್ಪು ಪೂಜಾರಿ, ಜಾಕೀರ ಹುಸೇನ ಮುಲ್ಲಾ, ಎಂ.ಎಂ. ಮುಲ್ಲಾ, ವಸಂತ ಹೊನಮೋಡೆ, ಸೋಮನಾಥ ಕಳ್ಳಿಮನಿ ಮತ್ತಿತರರಿದ್ದರು.