ಕಾರ್ಕಳ: ಎಲ್ಲ ಸವಲತ್ತುಗಳನ್ನು ಜನರಿಗೆ ತಲುಪಿಸುವುದು ಸರ್ಕಾರದಿಂದ ಅಸಾಧ್ಯ. ಸ್ಥಳೀಯ ಸಂಘ ಸಂಸ್ಥೆಗಳು, ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮಾಡುವ ಬಂಡಿಮಠ ಫೌಂಡೇಶನ್‌ನಂತಹ ಸಂಸ್ಥೆಗಳು ಶಿಬಿರಗಳನ್ನು ಆಯೋಜಿಸಿ ಅರ್ಹ ಬಡ ಜನರಿಗೆ ಸವಲತ್ತುಗಳನ್ನು ಒದಗಿಸಿ ಸಹಕರಿಸುತ್ತಿರುವುದು ಶ್ಲಾಘನೀಯ ಎಂದು ಕಾರ್ಕಳದ ಇಎನ್‌ಟಿ ತಜ್ಞ ಡಾ.ಅನಂತ ಕಾಮತ್ ಹೇಳಿದರು.
ಕಾರ್ಕಳ ಅಯ್ಯಪ್ಪ ನಗರದ ವಿಜೇತ ವಿಶೇಷ ಶಾಲೆಯಲ್ಲಿ ಕಾರ್ಕಳ ಬಂಡಿಮಠ ಫೌಂಡೇಶನ್, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಶ್ರವಣ ಉಚಿತ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದರು. ವಿಟ್ನ ಅರ್ತ್ ಕ್ಲಿನಿಕ್‌ನ ಡಾ.ಅಂಕಿತಾ, ಶ್ರೀದುರ್ಗಾ ವಿದ್ಯಾ ಸಂಘ ಅಧ್ಯಕ್ಷ ಕೆ.ರಾಧಾಕೃಷ್ಣ ಶೆಟ್ಟಿ, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಹರೀಶ್ ಆಚಾರ್ಯ, ವಿಜೇತ ವಿಶೇಷ ಶಾಲೆ ಸಂಸ್ಥಾಪಕಿ ಡಾ.ಕಾಂತಿ ಹರೀಶ್, ಬಂಡಿಮಠ ಫೌಂಡೇಶನ್ ಕಾರ್ಕಳ ಮುಖ್ಯಸ್ಥ ರಿಜ್ವಾನ್, ಟೀಮ್ ಈಶ್ವರ್ ಮಲ್ಪೆ ಅಧ್ಯಕ್ಷ ಲವ ಕುಮಾರ್, ಹರೀಶ್ ಶೆಟ್ಟಿ ಬಂಡಿಮಠ, ಹೆಲ್ಪ್‌ಲೈನ್‌ನ ಮುಖ್ಯಸ್ಥ ಮುಸ್ತಫ್, ಮ್ಯಾನೇಜಿಂಗ್ ಟ್ರಸ್ಟಿ ಹರೀಶ್ ಉಪಸ್ಥಿತರಿದ್ದರು. ಶ್ವೇತಾನಿತಿನ್ ಕಾರ್ಯಕ್ರಮ ನಿರೂಪಿಸಿದರು.