ಬೆಂಗಳೂರು ಕಾವೇರಿ ನೀರು ವಿಚಾರವಾಗಿ ವಿವಿಧ ಸಂಘಟನೆಗಳು ಮಂಗಳವಾರ (ಸೆ.26) ‘ಬೆಂಗಳೂರು ಬಂದ್’ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ೋಷಿಸಲಾಗಿದ್ದು, ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೆ.26ರಂದು ರಜೆ ೋಷಿಸಲಾಗಿದೆ. ಈ ರಜೆಯನ್ನು ಮುಂಬರುವ ಭಾನುವಾರ ಅಥವಾ ರಜಾ ದಿನಗಳಲ್ಲಿ ಸರಿದೂಗಿಸುವಂತೆ ಜಿಲ್ಲಾ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ವಿವಿಧ ಸಂಘಟನೆಗಳು ಕರೆದಿರುವ ಬಂದ್‌ಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿಕ್ಷಣ ಇಲಾಖೆ ರಜೆ ೋಷಿಸಿದೆ. ಅದರಂತೆ ಖಾಸಗಿ ಶಾಲೆಗಳಿಗೆ ರಜೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆಗಳು ಮುಂದೂಡಿಕೆ
ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು ವಿವಿಯ ಸೆ.26ರಂದು ನಿಗದಿಯಾಗಿದ್ದ 2 ಮತ್ತು 4ನೇ ಸೆಮಿಸ್ಟರ್ ಸ್ನಾತಕ ಪದವಿ ಪರೀಕ್ಷೆಯನ್ನು ಸೆ.27ಕ್ಕೆ ಮುಂದೂಡಿದೆ. ಬೆಂ.ನಗರ ವಿವಿಯ 2 ಮತ್ತು 4ನೇ ಸೆಮಿಸ್ಟರ್ ಪದವಿ ಪರೀಕ್ಷೆಯನ್ನು ಅ.3ರಂದು ನಡೆಸಲು ಮರು ನಿಗದಿ ಮಾಡಿದೆ.