ಬೆಂಗಳೂರು: ನಮ್ಮ ಮೆಟ್ರೋ ಪಾರ್ಕಿಂಗ್ ನಲ್ಲಿ ಸ್ಕೂಟರ್ ಕದ್ದು ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿ ಬ್ಯಾಟರಾಯನಪುರ ಪೊಲೀಸರ ಬಲೆಗೆ ಸಿಲುಕಿದ್ದಾನೆ.
ಆರೋಪಿ ಇಬ್ರಾನ್ ಬಂಧಿತ. ನಾಯಂಡಹಳ್ಳಿ ಮೆಟ್ರೋ ನಿಲ್ದಾಣ ದ ಪಾರ್ಕಿಂಗ್ ನಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದ. ಇದರ ತನಿಖೆ ಕೈಗೊಂಡ ಇನ್ಸ್‌ಪೆಕ್ಟರ್ ನಾಗರಾಜು ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅಪರಾಧ ಕೃತ್ಯಗಳು ಬೆಳಕಿಗೆ ಬಂದಿವೆ. ಶಿವಾಜಿನಗರ, ನಂದಿಲೇಔಡ್, ವಿಜಯನಗರ, ಅಮೃತಹಳ್ಳಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದಾನೆ.
ಹನುಮಂತ ನಗರ, ಕೆಂಗೇರಿ, ಕಾಮಾಕ್ಷಿ ಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.6ಲಕ್ಷ ಮೌಲ್ಯದ 86 gm ಚಿನ್ನಾಭರಣ ಮತ್ತು 5 ಸ್ಕೂಟರ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.