ಜಿಲ್ಲೆ

ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! ನಿರ್ವಾಹಿಗಳಿಗೆ ಎಚ್ಚರಿಕೆ ನೀಡಿದ ಹವಮಾನ ಇಲಾಖೆ ..Weather report

Weather report: ಬೆಂಗಳೂರು ನಗರದಲ್ಲಿ ಸೋಮವಾರ (ಅಕ್ಟೋಬರ್​ 06) ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್ ಮತ್ತು 28 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

X ನಲ್ಲಿ ಹವಾಮಾನ ವರದಿ ಹಂಚಿಕೊಂಡ KSNDMC

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) 7 ದಿನಗಳ ಹವಮಾನ ವರದಿಯನ್ನು ತನ್ನ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂದು ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಹಾಗೂ ಅಕ್ಟೋಬರ್ 8 ರಿಂದ 10 ರವರೆಗೆ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಬರೆದುಕೊಂಡಿದೆ.

ಯಾವ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ?

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಸೇರಿದಂತೆ ಇತರ ಪ್ರದೇಶಗಳಲ್ಲಿ ಗುಡುಗು, ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನ AQI ಮತ್ತು ಆರ್ದ್ರತೆ

ನಗರದಾದ್ಯಂತ ಆರ್ದ್ರತೆಯು ಸುಮಾರು ಶೇ. 88 ರಷ್ಟು ಹಾಗೂ ವಾಯು ಗುಣಮಟ್ಟ ಸೂಚ್ಯಂಕ (AQI) ಸುಮಾರು 30 ರಷ್ಟಿರುವ ನಿರೀಕ್ಷೆಯಿದೆ. ಇದು ನಗರ ಮತ್ತು ಸುತ್ತಮುತ್ತಲಿನ ಗಾಳಿಯ ಗುಣಮಟ್ಟವನ್ನು ಸೂಚಿಸುತ್ತದೆ.

IMD ಸಲಹೆಗಳೇನು?

ನಗರದಾದ್ಯಂತ ಸುರಿಯುವ ಮಳೆಗೆ ವಿದ್ಯುತ್​ ವ್ಯತ್ಯಯ ಉಂಟಾಗಬಹುದು. ಸಂಚಾರದಲ್ಲಿ ಜನದಟ್ಟಣೆ ಹಾಗೂ ಮರದ ಕೊಂಬೆಗಳು ನೆಲಕ್ಕುರುಳುವ ಸಾಧ್ಯತೆ ಇರುತ್ತದೆ. ಹಾಗಾಗಿ ನಿವಾಸಿಗಳು ಮನೆಯೊಳಗೆ ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಕೊಳ್ಳುವಂತೆ ಇಲಾಖೆ ಸಲಹೆ ನೀಡಿದೆ. (ಏಜೆನ್ಸೀಸ್)