ಜಿಲ್ಲೆ

Heavy Rain : ಇನ್ನೂ 2-3 ದಿನ ಮಳೆ ಫಿಕ್ಸ್​! ಧೋ ಎಂದು ಸುರಿಯುತ್ತಿರುವ ಮಳೆಗೆ ಬೆಂಗಳೂರು ತತ್ತರ

Webdesk - Savina Naik

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ( Heavy Rain ) ಶುರುವಾಗಿದ್ದು, ಬಿಟ್ಟು ಬಿಡದೆ ಧೋ ಎಂದು ಸುರಿಯುತ್ತಿರುವ ಈ ಮಳೆಯಿಂದಾಗಿ ದಿನನಿತ್ಯದ ಚಟುವಟಿಕೆಗಳಿಗೆ ಮಳೆರಾಯ ಕಿರಿಕಿರಿ ಮಾಡ್ತಿದ್ದಾನೆ.

ಆಗ್ನೆಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಕಾರಣ ಇನ್ನೂ 2-3 ದಿನ ಇದೇ ರೀತಿಯ ಜಡಿಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಜಡಿ ಮಳೆಗೆ ಉದ್ಯಾನ ನಗರಿ ನೆನೆದು ಮುದ್ದೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡು ಇಡೀ ನಗರವೇ ಜಲಾವೃತಗೊಂಡಿದೆಯೋ ಎಂಬ ಭಾವ ಮೂಡಲು ಕಾರಣವಾಯ್ತು. ಕೆಲವು ಐಟಿ ಖಪನಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ.

ಮಳೆಯಿಂದಾಗಿ ಮೆಜೆಸ್ಟಿಕ್ ಸೇರಿದಂತೆ ಎಲ್ಲೆಡೆ ರಸ್ತೆಗಳಲ್ಲಿ ನೀರು ನಿಂತು ಅವಾಂತರ ಸೃಷ್ಟಿಸಿತು. ಉತ್ತರದ ಭಾಗಗಳಾದ ವಿದ್ಯಾರಣ್ಯಪುರ, ಕೋರಮಂಗಲ, ಯಲಹಂಕ, ದೇವನಹಳ್ಳಿ, ಹೆಣ್ಣೂರು ಕ್ರಾಸ್, ಜಕ್ಕೂರು, ಥಣಿಸಂದ್ರಗಳಲ್ಲಿ ಮಳೆ ಹೆಚ್ಚಾಗಿ ಆರ್ಭಟಿಸಿತು.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ

ಚಾಮರಾಜನಗರ ತುಮಕೂರು, ಕೊಡಗು

ಮಂಡ್ಯ, ರಾಮನಗರ, ಹಾಸನ, ಮೈಸೂರು

ಬೆಂಗಳೂರು, ಕೋಲಾರ, ಶಿವಮೊಗ್ಗ

ಯಾವ ಜಿಲ್ಲೆಗೆ ಆರೆಂಜ್​​ ಅಲರ್ಟ್​​ :

ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ಯಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇತ್ತ, ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಇನ್ನೂ 4 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಯಾವ ಜಿಲ್ಲೆಗೆ ಯೆಲ್ಲೋ ಅಲರ್ಟ್​​ :