ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಬೆಂಗಳೂರಿನ ವಿಜಯನಗರ ಎಂಸಿ ಲೇಔಟ್ನಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ. ಇವರು ಡಿವೈಎಸ್ಪಿ ಆಗಿ ನಿವೃತ್ತರಾದವರು.
ಹನುಮಂತಪ್ಪ ಮಾಗಡಿರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದರು. ಯಶವಂತಪುರದಲ್ಲಿ ಎಸಿಪಿಯಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು. ಸದ್ಯ ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದೇವಸ್ಥಾನದ ಮೇಲೆ ದಾಳಿ ನಡೆಸೋದಕ್ಕೆ ಸಿದ್ಧರಾಗಿದ್ರು ಉಗ್ರರು!: ಪಾಕಿಸ್ತಾನದಿಂದ ಕರೆ ಕೂಡ ಬಂದಿತ್ತು ಅವರಿಗೆ!
ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದ ಹನುಮಂತಪ್ಪ ಬ್ಲಡ್ ಕ್ಯಾನ್ಸರ್ನಿಂದ ಬಳಲಿದ್ದರು. ಇದೇ ವಿಚಾರವಾಗಿ ಮಾನಸಿಕ ಖಿನ್ನತೆಗೂ ಒಳಗಾಗಿದ್ರು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಆಪ್ತರು ಹೇಳಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..