ಜಿಲ್ಲೆ

ಬೆಂಗ್ಳೂರು ಸೇಫ್ ಮತ್ತಿಲ್ಲ ಲಾಕ್

Mandara

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ಒಟ್ಟಾರೆ ಪರಿಸ್ಥಿತಿ ನಿಯಂತ್ರಣದಲ್ಲಿರುವ ಕಾರಣದಿಂದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಲಾಕ್​ಡೌನ್ ಅಗತ್ಯವಿಲ್ಲ ಎಂಬ ನಿರ್ಧಾರ ಕೈಗೊಳ್ಳುವ ಮೂಲಕ ಎಲ್ಲ ವದಂತಿಗಳಿಗೆ ಸರ್ಕಾರ ತೆರೆ ಎಳೆದಿದೆ.

ಕರೊನಾ ನಿಯಂತ್ರಣದಲ್ಲಿ ಬೆಂಗಳೂರು ದೇಶಕ್ಕೇ ಮಾದರಿಯಾಗಿದೆ. ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಜನರೂ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಸರ್ಕಾರದ ಜತೆ ಕೈಜೋಡಿಸಬೇಕು. | ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ

ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಲಾಕ್​ಡೌನ್ ವಿಚಾರ ಚರ್ಚೆಗೆ ಬರಲಿಲ್ಲ. ಹೀಗಾಗಿ ಬಳಿಕ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಸಚಿವರು, ಅಧಿಕಾರಿಗಳ ಸಭೆಯಲ್ಲಿ ಲಾಕ್​ಡೌನ್ ಮಾಡದಿರುವ ನಿರ್ಧಾರ ಕೈಗೊಳ್ಳಲಾಯಿತು. ಬೆಂಗಳೂರಿನಲ್ಲಿ ಲಾಕ್​ಡೌನ್ ಬದಲಾಗಿ ತುರ್ತಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ರಾಜಧಾನಿಯ ಸಚಿವರು, ಸರ್ವ ಪಕ್ಷಗಳ ಸಂಸದ, ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಮತ್ತೊಂದು ಸಭೆಯನ್ನು ಶುಕ್ರವಾರ ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಕರೆದಿದ್ದಾರೆ. ಕರೊನಾ ಸೋಂಕು ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಪತ್ತೆಯಾಗುತ್ತಿದ್ದರೂ ಬೆಂಗಳೂರು ಸುರಕ್ಷಿತ ವಾಗಿದೆ. ಲಾಕ್​ಡೌನ್ ಜಾರಿಯಾಗುವುದಿಲ್ಲ, ಇದಂತೂ ಸ್ಪಷ್ಟ. ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆ ಪರ್ಯಾಯ ಪರಿಹಾರ ಮಾಗೋಪಾಯಗಳ ಕುರಿತು ರ್ಚಚಿಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ನೈಟ್ ಕರ್ಫ್ಯೂ ಇಲ್ಲ: ಲಾಕ್​ಡೌನ್ ಜತೆಗೆ ನೈಟ್ ಕರ್ಫ್ಯೂವನ್ನೂ ಮತ್ತೆ ಜಾರಿಗೊಳಿಸಲಾಗದೆಂದು ಸಚಿವ ಅಶೋಕ್ ಸ್ಪಷ್ಟಪಡಿಸಿದರು. ಖಾಸಗಿ ವೈದ್ಯಕೀಯ ಕಾಲೇಜುಗಳ 10,00 ಹಾಸಿಗೆಗಳ ಪೈಕಿ ಅರ್ಧದಷ್ಟು ಕರೊನಾ ಸೋಂಕಿತರ ಚಿಕಿತ್ಸೆಗಾಗಿ ಪಡೆಯಲು ಯೋಚಿಸಲಾಗಿದೆ. ಈಗಾಗಲೇ ಕೆಲವು ಕಾಲೇಜು ಆಡಳಿತ ಮಂಡಳಿಗಳು ಒಪ್ಪಿವೆ. ಇನ್ನುಳಿದ ಕಾಲೇಜು ಆಡಳಿತ ಮಂಡಳಿಗ ಳೊಂದಿಗೆ ಮಾತುಕತೆ ನಡೆಸಿ ಅಂತಿಮಗೊಳಿಸುವ ಜವಾಬ್ದಾರಿಯನ್ನು ಸಿಎಂ ತಮಗೆ ಒಪ್ಪಿಸಿದ್ದಾರೆ ಎಂದು ಸಚಿವರು ವಿವರಿಸಿದರು.