ಜಿಲ್ಲೆ

ಹವಾಮಾನ ವರದಿ: ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ | Weather report

Weather report: ಕರ್ನಾಟಕದ ರಾಜಧಾನಿ ನಗರದಲ್ಲಿ ಮಂಗಳವಾರ (ಸೆಪ್ಟೆಂಬರ್ 30) ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಹಾಗೂ ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿರಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

X ನಲ್ಲಿ ಹವಾಮಾನ ವರದಿ ಹಂಚಿಕೊಂಡ KSNDMC

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಏಳು ದಿನಗಳ ಹವಾಮಾನ ವರದಿಯನ್ನು X ಎಕ್ಸ್​ ನಲ್ಲಿ ಹಂಚಿಕೊಂಡಿದ್ದು, ರಾಜ್ಯಾದ್ಯಂತ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತರ ಇದೆ ಎಂದು ಬರೆದುಕೊಂಡಿದೆ.

ಆರ್ದ್ರತೆಯು ಶೇ. 88 ರಷ್ಟಿರುವ ನಿರೀಕ್ಷೆಯಿದೆ. ವಾಯು ಗುಣಮಟ್ಟ ಸೂಚ್ಯಂಕ (AQI) ಸುಮಾರು ಶೇ.75 ರಷ್ಟಿರುವ ನಿರೀಕ್ಷೆಯಿದೆ. ಇದು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಗಾಳಿಯ ಗುಣಮಟ್ಟವನ್ನು ಸೂಚಿಸಿದ್ದು, ದಿನವಿಡೀ ಒಂದೇ ಆಗಿರುತ್ತದೆ ಎಂದು ತಿಳಿಸಿದೆ.

ಮುಂಬರುವ ದಿನಗಳ ಹವಾಮಾನ ನವೀಕರಣ

ಹವಾಮಾನ ಇಲಾಖೆಯ ಪ್ರಕಾರ, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ. ಮಂಗಳೂರಿನ ಕರಾವಳಿ ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಚಂಡಮಾರುತ ಬೀಸುವ ಸಾಧ್ಯತೆ ಇದೆ. ಬುಧವಾರ (ಅಕ್ಟೋಬರ್ 1) ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. (ಏಜೆನ್ಸೀಸ್​)